Road Accident : ಕರ್ನಾಟಕದಲ್ಲಿ ಒಂದೇ ದಿನ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಂದರಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದರೆ, ಮತ್ತೊಂದರಲ್ಲಿ ಚಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಗಳು ನಾಗರಭಾವಿ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಡೆದಿವೆ.

Road Accident : ನಾಗರಭಾವಿಯಲ್ಲಿ ಲಾರಿ ಡಿಕ್ಕಿ – ಬೈಕ್ ಸವಾರ ಸಾವು
ನಗರದ ನಾಗರಭಾವಿಯ ಮಲೇ ಮಹದೇಶ್ವರ ದೇವಸ್ಥಾನದ ಸಮೀಪ ಬೈಕ್ಗೆ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದಾನೆ.
ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ, ನಮ್ಮೂರ ತಿಂಡಿ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದ ನಿವಾಸಿ ಪ್ರಕಾಶ್ ಎಂ.ಡಿ. (29) ಎಂದು ಗುರುತಿಸಲಾಗಿದೆ.
ಪ್ರಕಾಶ್ ತಮ್ಮ ಸ್ನೇಹಿತನೊಂದಿಗೆ ಪರಿಚಿತನ ಮಗುವಿನ ಜನ್ಮದಿನ ಕಾರ್ಯಕ್ರಮಕ್ಕೆ ಹೋಗಿ ಮನೆಗೆ ಮರಳುತ್ತಿದ್ದ ವೇಳೆ, ಹಿಂದಿನಿಂದ ಬಂದ ಲಾರಿ ಬೈಕ್ಗೆ ಗುದ್ದಿದೆ.
ಗಂಭೀರವಾಗಿ ಗಾಯಗೊಂಡ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮರಣ ಹೊಂದಿದ್ದಾರೆ.
ಇದನ್ನು ಓದಿ : ಮಗುವಿಗೆ ವಿಷವುಣಿಸಿದ ಪಾಪಿ ತಂದೆ!

ಸ್ನೇಹಿತನಿಗೆ ಗಾಯ, ಪ್ರಕರಣ ದಾಖಲು
ಬೈಕ್ನಲ್ಲಿ ಜೊತೆಯಾಗಿದ್ದ ಸ್ನೇಹಿತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಗೋಲ್ಡ್ ಲೋನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಕಾಶ್ ಸಾವಿನಿಂದ ಕುಟುಂಬದಲ್ಲಿ ಶೋಕ ಆವರಿಸಿದೆ.
ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಈ ಕುರಿತು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದೆಡೆ, ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದ ಬಳಿ ಇಂದು ಬೆಳಗ್ಗೆ ದಟ್ಟ ಮಂಜಿನಿಂದಾಗಿ ಈಚರ್ (ಕ್ಯಾಂಟರ್) ವಾಹನ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.ಮಂಜಿನಿಂದ ಚಾಲಕನಿಗೆ ರಸ್ತೆ ಕಾಣದೆ ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಆದರೆ ಚಾಲಕ ಪವಾಡದಂತೆ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡಿನಿಂದ ವೆಸ್ಟ್ ಪೇಪರ್ ತುಂಬಿಕೊಂಡು ಬರುತ್ತಿದ್ದ ವಾಹನದ ಸಂಚಾರ ಮಾರ್ಗ ಕುರಿತು ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನು ನೋಡಿ : ನನಗೆ Z ಶ್ರೇಣಿ ಭದ್ರತೆ ಕಲ್ಪಿಸಿ; ಸಿಎಂಗೆ ಜನಾರ್ದನ ರೆಡ್ಡಿ ಪತ್ರ




