
DAKSHINA KANNADA NEWS : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಕುಳ ಗ್ರಾಮದ ಕಲ್ಲಂದಡ್ಕದಲ್ಲಿ ನೀರಿನಿಂದ ತುಂಬಿದ್ದ ಮುಚ್ಚಿದ ಕೋರೆಯಲ್ಲಿ ಬಿದ್ದು ಒಬ್ಬ ವಿದ್ಯಾರ್ಥಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತ ಬಾಲಕನನ್ನು ಕಬಕ ನಿವಾಸಿ ಹಸೈನ್ ಅವರ ಪುತ್ರ ಮುಹಮ್ಮದ್ ಅಜ್ಮನ್ (15)ಎಂದು ಗುರುತಿಸ ಲಾಗಿದೆ. ಅಜ್ಮನ್ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಸ್ನೇಹಿತರೊಂದಿಗೆ ಕೋರೆಯ ಬಳಿಗೆ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಇನ್ನು ಘಟನೆಯ ಬಳಿಕ ಸ್ಥಳೀಯರು ಕೂಡಲೇ ನೆರವಿಗೆ ಧಾವಿಸಿದರೂ, ಬಾಲಕನನ್ನು ಬದುಕಿಸಲು ಸಾಧ್ಯವಾಗಲಿಲ್ಲ.ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.




