Silicon City ಯಲ್ಲಿ 34 ವರ್ಷದ ಯುವತಿಯೊಬ್ಬಳು ದುರಂತ ಅಂತ್ಯ ಕಂಡಿದ್ದಾಳೆ.

ಬೆಂಗಳೂರು ನಗರದ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ರಮಣ್ಯ ಲೇಔಟ್ನಲ್ಲಿ ಸಾಫ್ಟ್ವೇರ್ ಉದ್ಯೋಗಿ ಯುವತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಮಹಿಳೆಯನ್ನು ಶರ್ಮಿಳಾ (34) ಎಂದು ಗುರುತಿಸಲಾಗಿದೆ.
ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ
ಜನವರಿ 3ರ ರಾತ್ರಿ ಶರ್ಮಿಳಾ ವಾಸವಿದ್ದ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯಿಂದ ಉಂಟಾದ ಹೊಗೆಗೆ ಉಸಿರುಗಟ್ಟಿ ಆಕೆ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

ಸಾಫ್ಟ್ವೇರ್ ಇಂಜಿನಿಯರ್
ಮಂಗಳೂರು ಮೂಲದ ಶರ್ಮಿಳಾ ಕಳೆದ ಒಂದು ವರ್ಷದಿಂದ Silicon City ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಸುಮಾರು 10:30ರ ಸಮಯದಲ್ಲಿ ಮನೆದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಮನೆ ಮಾಲೀಕ ವಿಜಯೇಂದ್ರ ಅವರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : Bengaluru|ಸಿನಿಮಾ ಥಿಯೇಟರ್ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟ ಕಿಡಿಗೇಡಿ
ಕರ್ಟನ್ ಹಾಗೂ ಹಾಸಿಗೆಗಳು ಸುಟ್ಟು ಕರಕಲು
ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಮನೆಯ ಬಾಗಿಲು ಒಡೆದು ಒಳಗೆ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯ ಒಳಭಾಗದಲ್ಲಿ ಸೋಫಾ, ಕರ್ಟನ್ ಹಾಗೂ ಹಾಸಿಗೆಗಳು ಸುಟ್ಟು ಹೋಗಿರುವುದು ಕಂಡುಬಂದಿದೆ. ಶರ್ಮಿಳಾ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪ್ರಕರಣ ದಾಖಲು
ಆದರೆ ಚಿಕಿತ್ಸೆ ನೀಡುವಷ್ಟರಲ್ಲಿ ಶರ್ಮಿಳಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಇನ್ನು ಘಟನೆ ಸಂಬಂಧ ರಾಮಮೂರ್ತಿ ನಗರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದು, ಅಗ್ನಿ ಅವಘಡದ ನಿಖರ ಕಾರಣ ಮತ್ತು ಸಾವಿನ ಹಿನ್ನೆಲೆಯನ್ನು ಪತ್ತೆಹಚ್ಚಲು ಎಫ್ಎಸ್ಎಲ್ ಹಾಗೂ ಸೊಕೋ ತಂಡಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ನೋಡಿ : ಬಯಲು ಸೀಮೆ ಜಿಲ್ಲೆ ರೈತರಿಗೆ ಗುಡ್ ನ್ಯೂಸ್ : ಮುಂದಿನ ತಿಂಗಳು ಕೆರೆಗಳಿಗೆ ಹರಿಯಲಿದೆ ಭದ್ರಾ ಮೇಲ್ದಂಡೆ ಯೋಜನೆಯ ನೀರು




