Sonia Gandhi ಆಸ್ಪತ್ರೆಗೆ ದಾಖಲು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಇನ್ನು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಸುರಕ್ಷಿತವಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಅವರು ಎದೆ ರೋಗ ತಜ್ಞರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಆಸ್ಪತ್ರೆಗೆ ದಾಖಲು
ದೀರ್ಘಕಾಲದಿಂದ ಕೆಮ್ಮಿನ ಸಮಸ್ಯೆ ಎದುರಿಸುತ್ತಿರುವ 79 ವರ್ಷದ Sonia Gandhi, ನಗರದಲ್ಲಿ ವಾಯುಮಾಲಿನ್ಯ ಹೆಚ್ಚಾಗುವ ಅವಧಿಯಲ್ಲಿ ನಿಯಮಿತವಾಗಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಾರೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಇದನ್ನು ಓದಿ : ಹಿಂದೆಂದೂ ಕಾಣಿಸದ ಅವತಾರದಲ್ಲಿ Rukmini Vasanth
ಹೊಟ್ಟೆ ಸಂಬಂಧಿತ ಸಮಸ್ಯೆ
ಇತ್ತೀಚಿನ ವರ್ಷಗಳಲ್ಲಿ ಸೋನಿಯಾ ಗಾಂಧಿ ಅವರು ಆರೋಗ್ಯಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ಎದುರಿಸಿದ್ದಾರೆ. ಕೆಲ ತಿಂಗಳ ಹಿಂದೆ ಹೊಟ್ಟೆ ಸಂಬಂಧಿತ ಸಮಸ್ಯೆಯಿಂದಾಗಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ಅವರನ್ನು ದಾಖಲಿಸ ಲಾಗಿತ್ತು. ಫೆಬ್ರವರಿಯಲ್ಲಿ ಅವರು ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಆ ವೇಳೆ ಗ್ಯಾಸ್ಟ್ರೋಎಂಟರಾಲಜಿ ತಜ್ಞರ ಮೇಲ್ವಿಚಾರಣೆಯಲ್ಲಿದ್ದರು.
ತೀವ್ರ ವೈದ್ಯಕೀಯ ನಿಗಾ
ಕಳೆದ ವರ್ಷದ ಜೂನ್ 19ರಂದು, ಹೊಟ್ಟೆ ಸಂಬಂಧಿತ ಕಾಯಿಲೆಗೆ ಚಿಕಿತ್ಸೆ ಪಡೆದ ನಂತರ ಅವರನ್ನು ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಅಲ್ಲದೆ, ಇತ್ತೀಚಿನ ನಾಲ್ಕು ದಿನಗಳಿಂದ ಸೋನಿಯಾ ಗಾಂಧಿ ಅವರ ಮೇಲೆ ತೀವ್ರ ವೈದ್ಯಕೀಯ ನಿಗಾ ವಹಿಸಲಾಗಿತ್ತು ಎಂಬುದೂ ತಿಳಿದುಬಂದಿದೆ.

ಇದಲ್ಲದೆ, ಸೆಪ್ಟೆಂಬರ್ 2022ರಲ್ಲಿ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅಮೆರಿಕಕ್ಕೆ ಪ್ರಯಾಣಿಸಿದ್ದರು. ಆ ಸಂದರ್ಭದಲ್ಲಿ ಅವರ ಪುತ್ರ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಜೊತೆಗಿದ್ದರು.
ಇದನ್ನು ನೋಡಿ : ಅರಸುಗೆ ಹೋಲಿಕೆ ಬೇಡ ಅಂದಿದ್ದೇಕೆ ಸಿದ್ದರಾಮಯ್ಯ? ಅರಸು-ಸಿದ್ದು ಸಾಮ್ಯತೆ ಏನೇನು..?




