ಪುತ್ತೂರಿನಲ್ಲಿ ತಂದೆಯಿಂದ ಮಗಳ ಮೇಲೆ ಲೈಂಗಿಕ ದೌರ್ಜನ್ಯ, Pocso ಪ್ರಕರಣ ದಾಖಲು.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ, ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ Pocso ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತಂದೆಯೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಪೊಲೀಸ್ ಮಾಹಿತಿ ಪ್ರಕಾರ, 15 ವರ್ಷದ ಪುತ್ರಿಯ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ದೂರಿನ ಮೇರೆಗೆ, 40 ವರ್ಷದ ತಂದೆಯ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ, ಮತ್ತು ನಂತರ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಇದನ್ನು ಓದಿ : ಮೈಸೂರು ಹಳೆ ಕೋರ್ಟ್ಗೆ Bomb Threat ಸಂದೇಶ

ಹೆಚ್ಚಿನ ತನಿಖೆ
ಇನ್ನು ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಮಂಗಳೂರು ಲೇಡಿಗೋಷನ್ ಆಸ್ಪತ್ರೆಯಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನು ನೋಡಿ : ವಾರದ ಹಿಂದಷ್ಟೇ ಶತಕದಾಟ್ಟಿದ್ದ ಟೊಮೆಟೊ ಬೆಲೆ ಏಕಾಏಕಿ ಕುಸಿತ; ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್!




