ಕರೂರ್ ಕಾಲ್ತುಳಿತ ಪ್ರಕರಣ; ಟಿವಿಕೆ ಮುಖ್ಯಸ್ಥ Vijay ಗೆ CBI ಸಮನ್ಸ್.

ಕರೂರ್ನಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ನಟ-ರಾಜಕಾರಣಿ ಹಾಗೂ ತಮಿಳಗ ವೆಟ್ರಿ ಕಳಗಂ ಸಂಸ್ಥಾಪಕ ವಿಜಯ್ ಅವರಿಗೆ ಕೇಂದ್ರೀಯ ತನಿಖಾ ದಳ (CBI) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
41 ಮಂದಿ ಸಾವು
ಸೆಪ್ಟೆಂಬರ್ 27ರಂದು ಕರೂರ್ನಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್ ಅವರು ಭಾಗವಹಿಸಿದ್ದ ರ್ಯಾಲಿಯ ವೇಳೆ ಭಾರೀ ಕಾಲ್ತುಳಿತ ಸಂಭವಿಸಿದ್ದು, 41 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇನ್ನು ಈ ದಾರುಣ ಘಟನೆ ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನು ಓದಿ : ಮೆಟ್ರೋ ರೈಲನ್ನೇ ‘ಬರ್ತ್ಡೇ ಬ್ಯಾನರ್’ ಮಾಡಿದ Yash Fans!

ಸುಪ್ರೀಂ ಕೋರ್ಟ್ ಮೊರೆ
ಈ ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ SIT ವಿರುದ್ಧ ಟಿವಿಕೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಎಸ್ಐಟಿಯಲ್ಲಿ ತಮಿಳುನಾಡು ಪೊಲೀಸ್ ಅಧಿಕಾರಿಗಳೇ ಇರುವುದರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ವಾದಿಸಿ, ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಪಕ್ಷವು ಆಗ್ರಹಿಸಿತ್ತು.
CBI ತನಿಖೆ
ಇನ್ನು ಈ ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡ ಬಳಿಕ, ತಮಿಳುನಾಡು ಪೊಲೀಸರು ನಡೆಸುತ್ತಿದ್ದ ತನಿಖೆಯನ್ನು ಸುಪ್ರೀಂ ಕೋರ್ಟ್ ಕೇಂದ್ರೀಯ ತನಿಖಾ ದಳಕ್ಕೆ (CBI) ಹಸ್ತಾಂತರಿಸಿತು. ಜೊತೆಗೆ, ಸಿಬಿಐ ತನಿಖೆಯ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ಸಮಿತಿಯನ್ನು ರಚಿಸಲಾಗಿದೆ.

ವಿಜಯ್ಗೆ ಸಮನ್ಸ್ ಜಾರಿ
ಈ ಹಿನ್ನೆಲೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಗಾಗಿ ಹಾಗೂ ವಿಚಾರಣೆಯ ಭಾಗವಾಗಿ ನಟ Vijay ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
ಇದನ್ನು ನೋಡಿ : ತಾಲೂಕು ಆಸ್ಪತ್ರೆಯಲ್ಲಿ ತಪ್ಪುತ್ತಿಲ್ಲ ಸಮಸ್ಯೆಗಳು – ಅಧಿಕಾರಿ ಬಂದಾಗ ಜನ ಏನ್ಮಾಡಿದ್ರು ಗೊತ್ತಾ




