Belagavi : ಮೃಣಾಲ್ ಹೆಬ್ಬಾಳಕರ್ ಕಾರ್ ಚಾಲಕನಿಗೆ ಚಾಕು ಇರಿತ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿರುವ ನಡೆಸಿದ ಘಟನೆ Belagavi ಯಲ್ಲಿ ನಟೆದಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್ (32) ಚಾಕು ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾನೆ.
ಚಾಕು ಇರಿದು ಎಸ್ಕೇಪ್
ನಗರದ ಕ್ಲಬ್ ರಸ್ತೆಯಲ್ಲಿ ಮಧ್ಯಾಹ್ನ ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಸವಂತ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಎದೆ, ಭುಜ ಹಾಗೂ ತೊಡೆ ಸೇರಿದಂತೆ ನಾಲ್ಕು ಕಡೆ ಚಾಕುವಿನಿಂದ ಇರಿದು ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ಇದನ್ನು ಓದಿ : ಟಿವಿಕೆ ಮುಖ್ಯಸ್ಥ, ನಟ ವಿಜಯ್ಗೆ CBI ಸಮನ್ಸ್

ಆಸ್ಪತ್ರೆಗೆ ದಾಖಲು
ಇನ್ನು ಗಂಭೀರವಾಗಿ ಗಾಯಗೊಂಡ ಬಸವಂತ ಕಡೋಲ್ಕರ್ ಅವರನ್ನು ತಕ್ಷಣ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಯ ಮಾಹಿತಿ ಪಡೆದ ಡಿಸಿಪಿ, ಎಸಿಪಿ ಹಾಗೂ ಮೃಣಾಲ್ ಹೆಬ್ಬಾಳ್ಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲು
ಇನ್ನು ಈ ಘಟನೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಹಲವು ವರ್ಷಗಳಿಂದ ಬಸವಂತ ಕಡೋಲ್ಕರ್ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದ ಮಾಹಿತಿ ಇದೆ.

ಇದನ್ನು ನೋಡಿ : ರಾಜ್ಯದಲ್ಲಿ ಹೆಚ್ಚಾಯ್ತು ಚಳಿಯ ಆರ್ಭಟ – ಹವಾಮಾನ ಇಲಾಖೆ ನೀಡ್ತು ಖಡಕ್ ಎಚ್ಚರಿಕೆ!




