ಹೊನ್ನಾವರದ ಬಳಿ ಪಲ್ಟಿಯಾಗಿ ಹೊತ್ತಿ ಉರಿದ Car – ಸುಟ್ಟು ಕರಕಲಾದ ಇಬ್ಬರು.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಸಮೀಪ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರೊಂದಕ್ಕೆ ಬೆಂಕಿ ಹೊತ್ತಿಕೊಂಡು, ಅದರಲ್ಲಿದ್ದ ಇಬ್ಬರು ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ.
ಕಾರು ಸಂಪೂರ್ಣ ಬೆಂಕಿಗಾಹುತಿ
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಕಾರಿನೊಳಗಿದ್ದ ಇಬ್ಬರ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದಾರೆ. ಇದರಿಂದಾಗಿ ಮೃತಪಟ್ಟವರ ಗುರುತು ಪತ್ತೆ ಹಚ್ಚುವುದು ಸಾಧ್ಯವಾಗದ ಸ್ಥಿತಿಯಲ್ಲಿದೆ.
ಇದನ್ನು ಓದಿ : Bengaluru ನಲ್ಲಿ ಪ್ರಿಯಕರನ ಮನೆಯಲ್ಲೇ ಯುವತಿ ಆತ್ಮಹತ್ಯೆ …!!

ಇಬ್ಬರು ಸಜೀವ ದಹನ
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿರಬಹುದೆಂದು ಶಂಕಿಸಲಾಗಿದೆ. ಡಿಕ್ಕಿಯ ತಕ್ಷಣವೇ ಕಾರಿಗೆ ಬೆಂಕಿ ಹೊತ್ತಿಕೊಂಡಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಬೆಂಕಿಯ ತೀವ್ರತೆಗೆ Car ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ವಾಹನದ ನೋಂದಣಿ ವಿವರ ಪತ್ತೆ ಮಾಡಲು ಅಡಚಣೆ ಉಂಟಾಗಿದೆ.
ಮೃತರ ಗುರುತಿಗಾಗಿ ತನಿಖೆ
ಇನ್ನು ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಹೊನ್ನಾವರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಪರಿಶೀಲನೆ ನಡೆಸಿದರು. ಸದ್ಯ ಕಾರು ಹಾಗೂ ಮೃತರ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಘಟನೆಯ ನಿಖರ ಕಾರಣ ಹಾಗೂ ಹಿನ್ನೆಲೆ ಕುರಿತು ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನು ನೋಡಿ : ಸಿಎಂ ದಾಖಲೆಗೆ ಸಂಭ್ರಮವೋ..ಸಂಭ್ರಮ – ಸಬ್ಬೇನಹಳ್ಳಿಯಲ್ಲಿ ಬಿರಿಯಾನಿ ವಿತರಣೆ




