ಕರ್ನಾಟಕ ಸಚಿವೆ Lakshmi Hebbalkar ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣದಲ್ಲಿ ಪೊಲೀಸರು ವೇಗವಾಗಿ ಕಾರ್ಯಾಚರಣೆ ನಡೆಸಿದ್ದಾರೆ.

Lakshmi Hebbalkar :ಘಟನೆ ನಡೆದ 24 ಗಂಟೆಗಳೊಳಗೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾರು ಚಾಲಕ ಬಸವಂತ ಕಡೋಲ್ಕರ್ಗೆ ಚೂರಿ ಇರಿತ
ನಿನ್ನೆ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ ಮೇಲೆ ಚಾಕು ಇರಿದು ಹತ್ಯೆ ಯತ್ನ ನಡೆಸಲಾಗಿತ್ತು. ಈ ದಾಳಿಯಲ್ಲಿ ಬಸವಂತ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಲ್ವರು ಆರೋಪಿಗಳ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ
- ಶಿವಯ್ಯ ಪೂಜಾರಿ
- ನಿತೇಶ್ ಬಡಿಗೇರ
- ಮೌನಪ್ಪ
- ಸಂಪತ್
ಎಂಬ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಗಾಯಗೊಂಡ ಬಸವಂತ ಅವರ ಸ್ನೇಹಿತ ಮದನ ಅವರು ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದನ್ನು ಓದಿ : ಗುರುತು ಸಿಗದಂತೆ ಸುಟ್ಟು ಕರಕಲಾದ Car – ಇಬ್ಬರು ಸಜೀವ ದಹನ

ACP ಶೇರಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ
ದೂರು ಆಧರಿಸಿ ಎಸಿಪಿ ಖಡೇಬಜಾರ್ ಶೇರಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ತಂಡವು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ.
ಹಲ್ಲೆಯ ಕಾರಣ ತನಿಖೆಯಿಂದ ತಿಳಿಯಲಿದೆ – ಪೊಲೀಸ್ ಕಮಿಷನರ್
ಈ ಕುರಿತು ಪ್ರತಿಕ್ರಿಯಿಸಿರುವ ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ,
“ಹಲ್ಲೆಗೊಳಗಾದ ಬಸವಂತ ಹಾಗೂ ಆರೋಪಿಗಳು ಪರಸ್ಪರ ಸ್ನೇಹಿತರಾಗಿದ್ದರು. ಹಲ್ಲೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿಯಲಿದೆ”
ಎಂದು ತಿಳಿಸಿದ್ದಾರೆ.
ಮುಂದಿನ ತನಿಖೆ ತೀವ್ರಗೊಳಿಸಿದ ಪೊಲೀಸರು
ರಾಜಕೀಯ ಹಿನ್ನೆಲೆ ಇರುವ ಪ್ರಕರಣವಾಗಿರುವುದರಿಂದ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಗಳು ಹೊರಬರುವ ಸಾಧ್ಯತೆ ಇದೆ.
ಇದನ್ನು ನೋಡಿ : CM ಯಾರಿಗೂ ಮನೆ ಕೊಟ್ಟಿಲ್ಲ – SIDDU ವಿರುದ್ಧ ಎಂ.ಟಿ.ಕೆ.ಆಕ್ರೋಶ




