Bengaluru ನಗರದಲ್ಲಿ ತಾಯಿಯ ಮೇಲಿನ ದ್ವೇಷಕ್ಕೆ ಮಗು Murder.

ಬೆಂಗಳೂರು ನಗರದ ವೈಟ್ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ನಲ್ಲೂರಹಳ್ಳಿಯಲ್ಲಿ ಶಹಜಾನ್ ಎಂಬ 6 ವರ್ಷದ ಬಾಲಕಿ ಯನ್ನು ದಾರುಣವಾಗಿ ಹತ್ಯೆ ಮಾಡಿರುವ ಘಟನೆ ನಗರವನ್ನು ಬೆಚ್ಚಿ ಬೀಳಿಸಿದೆ. ತಾಯಿಯ ಮೇಲಿನ ದ್ವೇಷದಿಂದ ಮಗಳನ್ನು ಹತ್ಯೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ.
ವೈಟ್ಫೀಲ್ಡ್ ಠಾಣೆಗೆ ದೂರು
ಬಾಲಕಿ ಶಹಜಾನ್ ಕತೂನ್ನ ತಂದೆ ಇಂಜಮುಲ್ ಶೇಖ್ ಲೇಬರ್ ಕೆಲಸ ಮಾಡುತ್ತಿದ್ದು, ನೆನ್ನೆ ಮಧ್ಯಾಹ್ನ ತಮ್ಮ ಮಗಳು ಒಂದು ದಿನದಿಂದ ಕಾಣೆಯಾಗಿರುವುದಾಗಿ ವೈಟ್ಫೀಲ್ಡ್ ಠಾಣೆಗೆ ದೂರು ನೀಡಿದ್ದರು. ಇನ್ನು ಪೊಲೀಸ್ ತನಿಖೆಯಲ್ಲಿ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆಯಾಗಿದ್ದು, ಬಾಲಕಿ ಪರಿಚಿತ ವ್ಯಕ್ತಿಯೊಂದಿಗೆ ಹೋಗಿರುವುದು ದೃಢಪಟ್ಟಿದೆ.

ಇದನ್ನು ಓದಿ : ಶಾಸಕ C.K Ramamurthy ಫೇಸ್ಬುಕ್, ಇನ್ಸ್ಟಾ ಹ್ಯಾಕ್ – ಯುವತಿಗೆ ಮೆಸೇಜ್
ಮಗು ಕೊಂದು ಶವ ಚರಂಡಿಗೆ ಎಸೆದ ಪಾಪಿಗಳು.!
ಈ ಹಿನ್ನೆಲೆಯಲ್ಲಿ ನಲ್ಲೂರಹಳ್ಳಿ ಪ್ರದೇಶದಲ್ಲಿ ಪೊಲೀಸರು ಮಧ್ಯರಾತ್ರಿವರೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಮಧ್ಯರಾತ್ರಿ ದೇವಸ್ಥಾನ ರಸ್ತೆಯ ಮೋರಿಯೊಂದರಲ್ಲಿ ಬ್ಯಾಗ್ನೊಳಗೆ ಪತ್ತೆಯಾಗಿದ್ದು, ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಹಳೆಯ ವೈಷಮ್ಯ
ಇನ್ನು ಪ್ರಾಥಮಿಕ ತನಿಖೆಯಲ್ಲಿ ಪ್ಲಾಸ್ಟಿಕ್ ವೈರ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ ಎಂದು ದೃಢಪಟ್ಟಿದೆ. ಹಲ್ಲೆ ಅಥವಾ ಲೈಂಗಿಕ ದೌರ್ಜನ್ಯದ ಯಾವುದೇ ಗುರುತುಗಳು ಕಂಡುಬಂದಿಲ್ಲ ಎಂದು ವೈಟ್ಫೀಲ್ಡ್ ಡಿಸಿಪಿ ತಿಳಿಸಿದ್ದಾರೆ. ಇನ್ನು ಆರೋಪಿ ಕುಟುಂಬ ಮತ್ತು ಬಾಲಕಿಯ ಕುಟುಂಬದ ನಡುವೆ ಹಳೆಯ ವೈಷಮ್ಯವಿತ್ತು. ಇದೇ ದ್ವೇಷದ ಹಿನ್ನೆಲೆಯಲ್ಲಿ ಮಗುವನ್ನು Murder ಮಾಡಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇದನ್ನು ನೋಡಿ : ಬಳ್ಳಾರಿ ಗಲಭೆ ಕಾಂಗ್ರೆಸ್ ಕುಮ್ಮಕ್ಕು ಜನಾರ್ಧನ್ ರೆಡ್ಡಿ ಮುಗಿಸೋ ಪ್ಲಾನ್




