Gubbi ಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೃದ್ಧೆ ಮಹಿಳೆಯ ಶವ ಪತ್ತೆ – ಮೃತ ಮಹಿಳೆಯ ಒಂದು ಕಣ್ಣಿನ ಗುಡ್ಡೆ ನಾಪತ್ತೆ..!

ತುಮಕೂರು ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ಜಿಲ್ಲೆಯಲ್ಲಿ ಗೃಹಿಣಿಯರು, ಕಾಲೇಜು ವಿದ್ಯಾರ್ಥಿನಿಯರು ಅನುಮಾನಸ್ಪದವಾಗಿ ಸಾವನ್ನಪ್ಪುತ್ತಿದ್ದಾರೆ. Gubbi ತಾಲೂಕಿನ ನಿಟ್ಟೂರು ಹೋಬಳಿಯ ಕಾರೆಕುರ್ಚಿ ಗ್ರಾಮದ ತೋಟದ ಮನೆಯಲ್ಲಿ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇನ್ನು ಮೃತರನ್ನು 66 ವರ್ಷದ ಅಂಬಿಕಾ ಅಲಿಯಾಸ್ ಭ್ರಮಾರಾಂಬಿಕಾ ಎನ್ನಲಾಗಿದೆ.
ಮೃತ ಮಹಿಳೆಯ ಒಂದು ಕಣ್ಣಿನ ಗುಡ್ಡೆ ನಾಪತ್ತೆ
ಇನ್ನು ತೋಟದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಂಬಿಕಾ ಅವರ ಮೃತದೇಹ ಪತ್ತೆಯಾಗಿದ್ದು, ಮಹಿಳೆಯ ಒಂದು ಕಣ್ಣಿನ ಭಾಗಕ್ಕೆ ತೀವ್ರ ಪೆಟ್ಟು ಬಿದ್ದು, ಕಣ್ಣಿನ ಗುಡ್ಡೆಯೇ ನಾಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.
ಇದನ್ನು ಓದಿ : ಸಂಚಲನ ಸೃಷ್ಟಿಸಿದ CM ಸಿದ್ದರಾಮಯ್ಯ ಹೇಳಿಕೆ!

ಇನ್ನು ಮೃತ ಅಂಬಿಕಾ ಅವರು ತಮ್ಮ ಮಗ ಮನೋಹರ್ ಹಾಗೂ ಸೊಸೆ ಕಾವ್ಯಶ್ರೀ ಅವರೊಂದಿಗೆ ಕಾರೆಕುರ್ಚಿ ಗ್ರಾಮದಲ್ಲಿ ವಾಸವಾಗಿದ್ರು. ಆದ್ರೆ ವಾಸದ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ.
ಶ್ವಾನದಳದ ಸಿಬ್ಬಂದಿಯಿಂದ ಪರಿಶೀಲನೆ
ಇನ್ನು ವಿಷಯ ತಿಳಿದು ಘಟನಾ ಸ್ಥಳಕ್ಕೆ ಚೇಳೂರು ಠಾಣೆಯ ಪೊಲೀಸರು ಹಾಗೂ ಎಎಸ್ಪಿ ಪುರುಷೋತ್ತಮ್ ಹಾಗೂ ಸಿಪಿಐ ರಾಘವೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೊತೆಗೆ ಬೆರಳಚ್ಚು ತಜ್ಞರು ಮತ್ತು ಶ್ವಾನದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನು ನೋಡಿ : BIG NEWS : ಬಳ್ಳಾರಿಯ ನೂತನ ವಲಯ ಐಜಿಪಿ ಆಗಿ ಡಾ.ಪಿಎಸ್ ಹರ್ಷ ಅಧಿಕಾರ ಸ್ವೀಕಾರ




