
PUTTURU ACCIDENT : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ನಡೆದ ಗಂಭೀರ ರಸ್ತೆ ಅಪಘಾತದಲ್ಲಿ ಮೂವರು ಪವಾಡ ಸದೃಶವಾಗಿ ಪಾರಾಗಿರುವ ಘಟನೆ ನಡೆದಿದೆ.
ಆರ್ಯಾಪು ಗ್ರಾಮದ ಸಂಟ್ಯಾರ್ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಪುತ್ತೂರಿನಿಂದ ಬೆಳ್ಳಾರೆಯತ್ತ ತೆರಳುತ್ತಿದ್ದ KSRTC ಬಸ್ಸಿಗೆ ಸುಳ್ಯ ಕಡೆಯಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಆದರೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿದಂತೆ ಇಬ್ಬರು ಪ್ರಯಾಣಿಕರು ಗಂಭೀರ ಗಾಯಗಳಾಗಿದೆ. ಅಪಘಾತದ ಸ್ಥಳಕ್ಕೆ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದರು.
ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ಮುಂದು ವರಿಸಿದೆ.




