Belagavi : ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Belagavi ಜಿಲ್ಲೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ದುರ್ಘಟನೆ ಸಂಭವಿಸಿದೆ. ಅವಘಡದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಜಿಲ್ಲೆಯಲ್ಲಿ ಘೋರ ದುರಂತ ಒಂದು ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟು, ಆರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇದನ್ನು ಓದಿ : ನೇಣು ಬಿಗಿದ ಸ್ಥಿತಿಯಲ್ಲಿ ವೃದ್ಧೆ ಮಹಿಳೆಯ ಶವ ಪತ್ತೆ
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮರಕುಂಬಿಯ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಬೆಳಗಾವಿ ಎಸ್ಪಿ ಕೆ ರಾಮರಾಜನ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನು ನೋಡಿ : ಸಿಎಂ ದಾಖಲೆಗೆ ಸಂಭ್ರಮವೋ..ಸಂಭ್ರಮ – ಸಬ್ಬೇನಹಳ್ಳಿಯಲ್ಲಿ ಬಿರಿಯಾನಿ ವಿತರಣೆ




