
ರಾಜ್ಯದಲ್ಲಿ ರೇಷನ್ ಕಾರ್ಡ್ ಪರಿಷ್ಕರಣೆ ಹಿನ್ನೆಲೆಯಲ್ಲಿ, ಸುಮಾರು 7-12 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದಾಗಬಹುದು ಎಂಬ ಸುದ್ದಿ ಜನಸಾಮಾನ್ಯರಲ್ಲಿ ಆತಂಕವನ್ನು ಹುಟ್ಟಿಸಿದೆ. ಈ ಬಗ್ಗೆ ರಾಜ್ಯ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ನಿಜವಾಗಿಯೂ ಬಡತನ ರೇಖೆಯ ಕೆಳಗಿನವರಿಗೆ ಮಾತ್ರ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಆದರೆ ಕೆಲವರು ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದಿರುವ ಪ್ರಕರಣಗಳು ಕಂಡುಬಂದಿವೆ. ಕೇಂದ್ರ ಸರ್ಕಾರವು ಮಹತ್ವದ ಮಾರ್ಗಸೂಚಿ ಹೊರಡಿಸಿ, ಅನರ್ಹರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಅವರನ್ನು ಎಪಿಎಲ್ ವರ್ಗಕ್ಕೆ ವರ್ಗಾಯಿಸುವಂತೆ ಸೂಚಿಸಿದೆ. ಇದರ ಉದ್ದೇಶ ಪಡಿತರ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ತರಬೇಕು ಮತ್ತು ನಿಜಕ್ಕೂ ಅಗತ್ಯವಿರುವವರಿಗೆ ಬಿಪಿಎಲ್ ಸೌಲಭ್ಯ ದೊರೆಯುವಂತೆ ಮಾಡುವುದು.

ಆದರೆ, ನಿಮ್ಮ ಬಿಪಿಎಲ್ ಕಾರ್ಡ್ ತಪ್ಪಾಗಿ ರದ್ದು ಆಗಿದ್ದರೂ ಭಯಪಡುವ ಅಗತ್ಯವಿಲ್ಲ. ಅಂತಹ ಫಲಾನುಭವಿಗಳು ತಕ್ಷಣವೇ ಆಹಾರ ಇಲಾಖೆಗೆ ಅರ್ಜಿ ಸಲ್ಲಿಸಿ, ಅಗತ್ಯ ದಾಖಲೆಗಳನ್ನು ಸಹ ಸಲ್ಲಿಸಬೇಕು. ಅಧಿಕಾರಿಗಳ ಪ್ರಕಾರ, ಅರ್ಜಿ ಸಲ್ಲಿಸಿದ 24 ಗಂಟೆಗಳೊಳಗೆ ನಿಮ್ಮ ಕಾರ್ಡ್ ಸರಿಪಡಿಸಿ, ಬಿಪಿಎಲ್ ಸೌಲಭ್ಯ ಮತ್ತು ಪಡಿತರ ಧಾನ್ಯಗಳನ್ನು ಒದಗಿಸಲಾಗುವುದು.
ಈ ಪ್ರಕ್ರಿಯೆಗಾಗಿಯೂ ನಿಗದಿತ ಮಾನದಂಡಗಳನ್ನು ಪೂರೈಸುವುದು ಅಗತ್ಯ. ಈ ಮೂಲಕ, ಯಾರಿಗೂ ಸರ್ಕಾರದ ಸಬ್ಸಿಡಿ ಸೌಲಭ್ಯದಿಂದ ವಂಚನೆ ಆಗುವುದನ್ನು ತಡೆಯಲಾಗುತ್ತದೆ ಮತ್ತು ಪಡಿತರ ವ್ಯವಸ್ಥೆ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತದೆ.




