ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ Shivamogga ದಲ್ಲಿ ನಡೆದಿದೆ.

Shivmogga ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ದುರ್ಘಟನೆ ಇಂದು (ಜನವರಿ 9) ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಇದನ್ನು ಓದಿ : BJP ಕಾರ್ಯಕರ್ತೆ ವಿವಸ್ತ್ರ ಪ್ರಕರಣಕ್ಕೆ Twist – ಬಯಲಾಯ್ತಾ ಸುಜಾತಾ ಹಂಡಿಯ ಅಸಲಿ ಮುಖ?
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾರ್ಥಿ
ಮೃತನನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಗಣೇಶ್ ಶಿವಮೊಗ್ಗ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ಹಾಸ್ಟೆಲ್ನಲ್ಲಿ ವಾಸವಿದ್ದ ಎನ್ನಲಾಗಿದೆ.

Shivamogga ದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು
ಇಂದು ಬೆಳಗ್ಗೆ ಸ್ನಾನಕ್ಕೆ ತೆರಳಿದ್ದ ವೇಳೆ ಗಣೇಶ್ ಏಕಾಏಕಿ ಕುಸಿದು ಬಿದ್ದಿದ್ದಾನೆ. ಈ ವೇಳೆ ಹಾಸ್ಟೆಲ್ ಸಿಬ್ಬಂದಿ ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ಮಧ್ಯೆಯಲ್ಲೇ ಗಣೇಶ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನು ನೋಡಿ : ತುಮಕೂರು ಜನರಿಗೆ ಗುಡ್ನ್ಯೂಸ್: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ?




