Ballari ಗಲಭೆ ಪ್ರಕರಣ-25 ಆರೋಪಿಗಳಿಗೆ ಜಾಮೀನು.

Ballari ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ನಂಬರ್ ನಾಲ್ಕರಲ್ಲಿ ಆರೋಪಿಗಳಾಗಿದ್ದ 25 ಮಂದಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ್ ಸಿಂಗ್ ಅವರನ್ನು ಹೊರತುಪಡಿಸಿ ಉಳಿದ ಆರೋಪಿಗಳಿಗೆ ಕೋರ್ಟ್ ರಿಲೀಫ್ ನೀಡಿದೆ.
ಬ್ಯಾನರ್ ಗಲಾಟೆ
ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದ ಮುಂದೆ ವಾಲ್ಮೀಕಿ ಪುತ್ಥಳಿ ಉದ್ಘಾಟನಾ ಬ್ಯಾನರ್ ಅಳವಡಿಸುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಗಿತ್ತು. ಈ ಸಂದರ್ಭ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ್ ಸಿಂಗ್ ಹಾರಿಸಿದ ಗುಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ಗೆ ತಗುಲಿ ಸಾವನ್ನಪ್ಪಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.
ಇದನ್ನು ಓದಿ : Bengaluru ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ

SP ಅಮಾನತು
ಈ ಘಟನೆ ರಾಜ್ಯ ರಾಜಕೀಯದಲ್ಲೂ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರಕರಣದ ಹಿನ್ನೆಲೆ ರಾಜ್ಯ ಸರ್ಕಾರ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಅಮಾನತು ಮಾಡಿದ್ದು, ಡಿಐಜಿಪಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿತ್ತು.
25 ಆರೋಪಿಗಳಿಗೆ ಜಾಮೀನು
ಈಗ ಪ್ರಕರಣದ ತನಿಖೆ ಮುಂದುವರಿದಿರುವ ನಡುವೆಯೇ, ಕೋರ್ಟ್ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಇದನ್ನು ನೋಡಿ : ‘ಟಾಕ್ಸಿಕ್’ ಟೀಸರ್ ಸುನಾಮಿ: ಯಶ್ ಪ್ರತಿಭೆ ಕಂಡು ಬೆರಗಾದ ಗೀತು ಮೋಹನ್ದಾಸ್




