10 ತಿಂಗಳ ಮಗು ಕೊಂದು ತಾನೂ Suicide ಮಾಡಿಕೊಂಡ ತಾಯಿ! ಸುಂದರಿಯ ಬಾಳಿನಲ್ಲಿ ಆಗಿದ್ದೇನು?

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇನ್ನು ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಅವರ ಅಜ್ಜಿ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಆಗಾಗ ಜಗಳ
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಷ್ಮಾ (27) ಎಂದು ಗುರುತಿಸಲಾಗಿದೆ. ಸುಷ್ಮಾ ನಾಲ್ಕು ವರ್ಷಗಳ ಹಿಂದೆ ಚಾರ್ಟರ್ಡ್ ಅಕೌಂಟೆಂಟ್ ಆಗಿದ್ದ ಯಶವಂತ್ ರೆಡ್ಡಿ ಎಂಬುವರನ್ನು ವಿವಾಹವಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಂಪತಿ ಆಗಾಗ ಜಗಳವಾಡುತ್ತಿದ್ದರು ಎಂದು ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಇದನ್ನು ಓದಿ : ಯುವತಿಯ ಖಾಸಗಿ ಅಂಗ ಮುಟ್ಟಿ ‘ಲೈಂಗಿಕ ಕಿರುಕುಳ’ – Rapido ಚಾಲಕ ಅರೆಸ್ಟ್!
ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ
ಮಾಹಿತಿಯ ಪ್ರಕಾರ, ಸುಷ್ಮಾ ಒಂದು ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಾಪಿಂಗ್ಗಾಗಿ ತಾಯಿ ಲಲಿತಾ (44) ಅವರ ಮನೆಗೆ ಹೋಗಿದ್ದರು. ಈ ವೇಳೆ ತಮ್ಮ ಮಗನೊಂದಿಗೆ ಮತ್ತೊಂದು ಕೋಣೆಗೆ ಹೋಗಿ, ಮಗನಿಗೆ ವಿಷ ನೀಡಿ ನಂತರ Suicide ಮಾಡಿಕೊಂಡಿದ್ದಾಳೆ.
ಆಸ್ಪತ್ರೆಗೆ ದಾಖಲು
ಪತಿ ಕೆಲಸ ಮುಗಿಸಿ ವಾಪಸ್ ಮನೆಗೆ ಬಂದು ರೂಮ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು, ಬಾಗಿಲು ಒಡೆದು ನೋಡಿದ್ದಾರೆ. ಈ ವೇಳೆ ಇಬ್ಬರೂ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ವೈದ್ಯರು ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನು ನೋಡಿ : TUMAKURU | ವಾಹನ ಡಿಕ್ಕಿ ಹೊಡೆದು ಚಿರತೆ ಸಾವು ಕಿಡಿಗೇಡಿಗಳಿಗಾಗಿ ಪೊಲೀಸರ ಬಲೆ

