Accident : ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಮೂವರಿಗೆ ಗಾಯ.

ಓವರ್ಟೇಕ್ ಮಾಡುವ ವೇಳೆ ಲಾರಿಗೆ ಕಾರು ಗುದ್ದಿದ ಪರಿಣಾಮ ಭೀಕರ ರಸ್ತೆ ಅಪಘಾತ ಸಂಭವಿಸಿ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ Chitradurga ಜಿಲ್ಲೆಯ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ನಡೆದಿದೆ.
ಓವರ್ ಟೇಕ್ ಮಾಡಲು ಹೋಗಿ ಅಪಘಾತ
ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ DYSP ಆಗಿ ಕಾರ್ಯನಿರ್ವಹಿಸುತ್ತಿರುವ ವೈಷ್ಣವಿ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಮಹಾರಾಷ್ಟ್ರದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚಾಲಕ ಅವಸರದಲ್ಲಿ ಓವರ್ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.
ಇದನ್ನು ನೋಡಿ : TUMAKURU | ರಾತ್ರೋರಾತ್ರಿ ರೆಸ್ಟೋರೆಂಟ್, ಕುರಿ ಶೆಡ್ ಧ್ವಂಸ – ಅಕ್ಕಪಕ್ಕದ ಜಮೀನಿನವರ ಕಿತ್ತಾಟ

ಇಬ್ಬರು ಸ್ಥಳದಲ್ಲೇ ದಾರುಣ ಸಾವು
ಇನ್ನು Accident ಪರಿಣಾಮ ಕಾರಿನಲ್ಲಿದ್ದ ಡಿವೈಎಸ್ಪಿ ವೈಷ್ಣವಿ ಅವರ ತಾಯಿ ಕಮಲ ಹರಿಬಾಬು (65) ಹಾಗೂ ಕಾರು ಚಾಲಕ ರಾಕೇಶ್ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಡಿವೈಎಸ್ಪಿ ವೈಷ್ಣವಿ ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದಲ್ಲಿ ಗಾಯಗೊಂಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಪ್ರಕರಣ ದಾಖಲು
ಘಟನೆ ಬಗ್ಗೆ ಮಾಹಿತಿ ಪಡೆದ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಇದನ್ನು ಓದಿ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ




