Ballari ಯಲ್ಲಿ ಬ್ಯಾನರ್ ಗಲಾಟೆ ನಡೆದು ಓರ್ವ ಮೃತಪಟ್ಟ ಬೆನ್ನಲ್ಲೇ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ.

ಬ್ಯಾನರ್ ವಿಚಾರಕ್ಕೆ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ನಗರದಲ್ಲಿ ಬ್ಯಾನರ್ ಅಳವಡಿಕೆಗೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನು ಜಾರಿ ಮಾಡಿದೆ.
ನಿಯಮ ಉಲ್ಲಂಘಿಸಿದರೆ ದಂಡ
ಇತ್ತೀಚೆಗೆ ನಡೆದ ಗಲಭೆ ಬಳಿಕ ಶಾಂತಿಭಂಗ ಮರುಕಳಿಸದಂತೆ ಎಚ್ಚರಿಕೆ ವಹಿಸಿರುವ ಜಿಲ್ಲಾಡಳಿತ, ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ Banner, ಹೋಲ್ಡಿಂಗ್ಸ್, ಫ್ಲೆಕ್ಸ್ ಹಾಗೂ ಪೋಸ್ಟರ್ ಅಳವಡಿಕೆಗೆ ನಿಷೇಧ ಹೇರಿದೆ.
ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಜಾಹೀರಾತುಗಳನ್ನು ಅಳವಡಿಸಲು ಸ್ಥಳೀಯ ಆಡಳಿತ ಸಂಸ್ಥೆಯ ಪೂರ್ವಾನುಮತಿ ಕಡ್ಡಾಯವಾಗಿರಲಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಇದನ್ನು ಓದಿ : Chitradurga ದಲ್ಲಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ದಾರುಣ ಸಾವು
ಜಿಲ್ಲಾಡಳಿತ ಕಠಿಣ ಕ್ರಮ
ನಿಯಮ ಜಾರಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸ ಲಾಗಿದ್ದು, ಅನಧಿಕೃತ ಬ್ಯಾನರ್ ಮತ್ತು ಜಾಹೀರಾತುಗಳ ಮೇಲೆ ಪೊಲೀಸ್ ಇಲಾಖೆ ಕಣ್ಣಿಟ್ಟಿದೆ.
ಬ್ಯಾನರ್ ವಿಚಾರವಾಗಿಯೇ ಜಿಲ್ಲೆ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಜಿಲ್ಲಾಡಳಿತ ಈ ಕಠಿಣ ನಿರ್ಧಾರ ಕೈಗೊಂಡಿದೆ.
ಜನಾರ್ದನ ರೆಡ್ಡಿ ಬರ್ತಡೇಗಿಲ್ಲ ಬ್ಯಾನರ್!
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಇಂದು ತಮ್ಮ ಜನ್ಮದಿನ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಬರ್ತ್ ಡೇ ಸಂದರ್ಭ ಅಥವಾ ಯಾವುದೇ ಕಾರ್ಯಕ್ರಮ ಇದ್ದಾಗ ಈ ಹಿಂದೆ ಬಳ್ಳಾರಿಯಲ್ಲಿ ಬ್ಯಾನರ್ಗಳು ರಾರಾಜಿಸುತ್ತಿದ್ದವು.
ಆದ್ರೆ ಇದೇ ಮೊದಲ ಬಾರಿಗೆ ಯಾವುದೇ ಬ್ಯಾನರ್ ಇಲ್ಲದೆ ಗಣಿದಣಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಸರಳವಾಗಿ ಆಚರಣೆ
ನಾಯಕನ ಜನ್ಮ ದಿನವನ್ನು ಸರಳವಾಗಿ ಆಚರಿಸಲು ಬೆಂಬಲಿಗರು ಕೂಡ ನಿರ್ಧರಿಸಿದ್ದು, ಅದ್ಧೂರಿ ಆಚರಣೆ ಮತ್ತು ಕೇಕ್ ಕಟ್ಟಿಂಗ್ ಕೂಡ ಬೇಡ ಎಂದು ಜನಾರ್ದನ ರೆಡ್ಡಿ ಬೆಂಬಲಿಗರಿಗೆ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.
ಹೀಗಾಗಿ ಕೇವಲ ಶುಭಾಶಯಕ್ಕೆ ಜನಾರ್ದನ ರೆಡ್ಡಿ ಬರ್ತ್ ಡೇ ಸೀಮಿತವಾಗಿರಲಿದೆ.
ಇದನ್ನು ನೋಡಿ : ಪಿಯುಸಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಎಸ್.ಆರ್.ಎ ಕಾಲೇಜಿನಲ್ಲಿ ಆರಂಭ




