ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದಲ್ಲಿ ಯುವತಿಯೊಬ್ಬಳು Suicide ಮಾಡಿಕೊಂಡಿದ್ದಾಳೆ.

ಪ್ರೀತಿ ಹೆಸರಲ್ಲಿ ಜೆಡಿಎಸ್ ಮುಖಂಡೆ ಪುತ್ರ ನೀಡಿದ ಕಿರುಕುಳ ಸಹಿಸಲಾಗದೇ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಪ್ರೀತಿ ಹೆಸರಲ್ಲಿ ಕಿರುಕುಳ
Suicide ಮಾಡಿಕೊಂಡ ಯುವತಿಯನ್ನು ರಿಶೆಲ್ ಡಿಸೋಜಾ (20) ಎಂದು ಗುರುತಿಸಲಾಗಿದೆ. ಆರೋಪಿಯು ಜೆಡಿಎಸ್ನ ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ ಪುತ್ರ ಚಿರಾಗ್ ಎಂದು ತಿಳಿದುಬಂದಿದೆ. ಚಿರಾಗ್, ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿಯ ನಿವಾಸಿ ರಿಶೆಲ್ ಡಿಸೋಜಾಳಿಗೆ ಪ್ರೀತಿಸುವಂತೆ ಒತ್ತಡ ಹೇರುತ್ತಿದ್ದನೆಂಬ ಆರೋಪ ಕೇಳಿಬಂದಿದೆ.
ಇದನ್ನು ಓದಿ : ಬಳ್ಳಾರಿಯಲ್ಲಿ Banner ಹಾವಳಿಗೆ ಬ್ರೇಕ್! ಜನಾರ್ದನ ರೆಡ್ಡಿ ಬರ್ತಡೇಗಿಲ್ಲ ಬ್ಯಾನರ್

ಬೇಗ ಸತ್ತು ಹೋಗು
ಚೈತ್ರಾ ಕೋಠಾರಕರ ಪುತ್ರ ಚಿರಾಗ್, ಕದ್ರಾ ಗ್ರಾಮದ ಕೆಪಿಸಿಎಲ್ ಕಾಲೋನಿ ನಿವಾಸಿ ರಿಶೆಲ್ ಡಿಸೋಜಾಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ. ಕಳೆದ ಕೆಲ ದಿನಗಳಿಂದ ಯುವತಿ ಮನೆ ಬಳಿ ಬಂದು ಹೋಗುತ್ತಿದ್ದ. ಪ್ರೀತಿ ಮಾಡಲು ಯುವತಿ ನಿರಾಕರಿಸಿದ್ದಕ್ಕೆ ಬೇಗ ಸತ್ತು ಹೋಗು ಎಂದು ಚಿರಾಗ್ ಹೇಳಿದ್ದ. ಇದರಿಂದ ನೊಂದ ರಿಶಾಲ್ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.
ಪ್ರಕರಣ ದಾಖಲು
ಈ ಸಂಬಂಧ ರಿಶೆಲ್ ತಂದೆ ಕ್ರಿಸ್ತೋದ್ ಫ್ರಾನ್ಸಿಸ್ ನೀಡಿದ ದೂರಿನ ಆಧಾರದ ಮೇಲೆ ಕದ್ರಾ ಪೊಲೀಸ್ ಠಾಣೆಯಲ್ಲಿ ಚಿರಾಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನು ನೋಡಿ : TUMAKURU | ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಓಪನ್ ಆಯ್ತು ಉಚಿತ ಪುಸ್ತಕ ಗೂಡು




