ಮಗನೊಬ್ಬ ತನ್ನ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ Hassan ಜಿಲ್ಲೆಯಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕುಪಿತ ಪುತ್ರನೊಬ್ಬ ತನ್ನ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ Hassan ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.
ಸ್ಟೀಲ್ ರಾಡ್ನಿಂದ ಹೊಡೆದು ಕೊಲೆ
ಮೃತ ವ್ಯಕ್ತಿಯನ್ನು ಸತೀಶ್ (60) ಎಂದು ಗುರುತಿಸಲಾಗಿದ್ದು, ಹತ್ಯೆಗೈದ ಆರೋಪಿಯನ್ನು ರಂಜಿತ್ (28) ಎಂದು ತಿಳಿದು ಬಂದಿದೆ. ತಾಯಿ ಮತ್ತು ಮಗ ಕೆ.ಆರ್.ನಗರದಲ್ಲಿ ನೆಲೆಸಿದ್ದರು. ಇದೇ ವಿಷಯಕ್ಕೆ ತಂದೆ-ಮಗನ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಶನಿವಾರ ರಾತ್ರಿ ಗಲಾಟೆ ವಿಕೋಪಕ್ಕೆ ಹೋಗಿದೆ. ಕೋಪಗೊಂಡ ರಂಜಿತ್ ಸ್ಟೀಲ್ ರಾಡ್ನಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ಇದನ್ನು ಓದಿ : JDS ನಾಯಕಿಯ ಪುತ್ರನಿಂದ ಯುವತಿಗೆ ಕಿರುಕುಳ – ಯುವತಿ ಆತ್ಮಹತ್ಯೆ

ಆರೋಪಿ ವಶಕ್ಕೆ
ಈ ವಪರಿಣಾಮ ಗಂಭೀರವಾಗಿ ಗಾಯಗೊಂಡ ಸತೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಘಟನಾ ಸ್ಥಳಕ್ಕೆ ಹಿರೀಸಾವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇನ್ನು ಆರೋಪಿ ರಂಜಿತ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಇದನ್ನು ನೋಡಿ : ರೈತರಿಗೆ ಪರಿಹಾರ ನೀಡದ ಜಿಲ್ಲಾಡಳಿತ ಡಿಸಿ ಕಾರನ್ನೇ ಜಪ್ತಿ ಮಾಡಿದ ಪಾರ್ಮರ್ಸ್




