
MANDYA NEWS : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ಡಿಎ ಸರ್ಕಾರ ಜಾರಿ ಮಾಡಿದ ಸರಳೀಕೃತ ಜಿಎಸ್ಟಿ 2.0 ವ್ಯವಸ್ಥೆಯನ್ನು ಹರ್ಷದಿಂದ ಸ್ವಾಗತಿಸುತ್ತ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಇಂದು ಮಂಡ್ಯದ ಕಾಮನಗುಡಿ ಸರ್ಕಲ್ ಹಾಗೂ ಪೇಟೆ ಬೀದಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಅದ್ಧೂರಿ ಸಂಭ್ರಮಾಚರಣೆ ನಡೆಸಿದರು.
ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ತೀರ್ಮಾನಕ್ಕೆ ಅಭಿನಂದನೆ ಸಲ್ಲಿಸಿದರು.
ಇನ್ನು ಸಂಭ್ರಮದ ವೇಳೆ ನಗರದ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ವ್ಯಾಪಾರಿಗಳಿಗೆ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಡಾ. ಎನ್.ಎಸ್. ಇಂದ್ರೇಶ್, ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಮ್, ಮುಖಂಡರಾದ ಇಂಡುವಾಳು ಸಚ್ಚಿದಾನಂದ, ಡಾ. ಸಿದ್ದರಾಮಯ್ಯ, ಸ್ವಾಮಿಗೌಡ ಹಾಗೂ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.




