ನ್ಯೂಜಿಲೆಂಡ್ ವಿರುದ್ಧ India ಭರ್ಜರಿ ಜಯ – ಫೀಲ್ಡ್ ನಲ್ಲಿ ವಿರಾಟ್ ಕೊಹ್ಲಿ ಆರ್ಭಟ.

ಮೂರು ಸರಣಿಯ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ದ ಭಾರತ ತಂಡವು ಇತಿಹಾಸ ನಿರ್ಮಿಸಿದೆ. ಟೀಮ್ ಇಂಡಿಯಾ ಮೂರು ದಿನಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನ ಸೋಲಿಸಿದೆ.

ಇತಿಹಾಸ ನಿರ್ಮಿಸಿದ ಭಾರತ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 8 ವಿಕೆಟ್ ಗೆ 300 ರನ್ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಟೀಮ್ ಇಂಡಿಯಾ 49 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 306 ರನ್ ಬಾರಿಸಿ ಗೆಲುವು ಸಾಧಿಸಿದೆ. ಈ ಮೂಲಕ 300ಕ್ಕೂ ಹೆಚ್ಚು ರನ್ ಗಳ ಗುರಿ ಬೆನ್ನಟ್ಟಿ 20 ಪಂದ್ಯಗಳನ್ನ ಗೆದ್ದ ವಿಶ್ವದ ಮೊದಲ ತಂಡವೆನಿಸಿಕೊಂಡಿದೆ.
ಇದನ್ನು ಓದಿ : A1 ಆರೋಪಿ ಪವಿತ್ರಾ ಗೌಡಗೆ ಮತ್ತೆ ಶಾಕ್ !

ಪಂದ್ಯಶ್ರೇಷ್ಠ ಪ್ರಶಸ್ತಿ ಯಾರಿಗೆ?
ಭಾರತದ ಪರ ಮೊಹಮದ್ ಸಿರಾಜ್, ಹರ್ಷಿತ್ ರಾಣಾ, ಕನ್ನಡಿಗ ಪ್ರಸಿದ್ ಕೃಷ್ಣ ತಲಾ ಎರಡು ವಿಕೆಟ್ ಕಬಳಿಸಿ ಮಿಂಚಿದ್ರು. 91 ಎಸೆತಗಳನ್ನ ಎದುರಿಸಿದ ಚೇಸಿಂಗ್ ಮಾಸ್ಟರ್ ಕೊಹ್ಲಿ 93 ರನ್ ಸಿಡಿಸಿ ಅಬ್ಬರಿಸಿದ್ರು. ಇನ್ನು ಬ್ಯಾಟಿಂಗ್ನಲ್ಲಿ ವಿರೋಚಿತ ಪ್ರದರ್ಶನ ನೀಡಿದ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ್ರು.

ಇದನ್ನು ನೋಡಿ : ಪೂಜೆ ಸಾಮಗ್ರಿ ತರಲು ಹೋಗಿದ್ದ ವೇಳೆ ಕಾಲುವೆಗೆ ಬಿದ್ದು ಬೈಕ್ ಸವಾರ ಸಾವು




