Bank Robbery : ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮದಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಖದೀಮರು Bank Robbery ಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಶೌಚಾಲಯದ ಹಿಂಭಾಗದ ಗೋಡೆಯನ್ನು ಕೊರೆದು ಬ್ಯಾಂಕ್ ಒಳಗೆ ನುಗ್ಗಿರುವ ದುಷ್ಕರ್ಮಿಗಳು, ಸ್ಟ್ರಾಂಗ್ ರೂಮ್ ಒಡೆಯಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ. ಪರಿಣಾಮ ಕಳ್ಳರು ಯಾವುದೇ ಹಣಕಾಸು ಲೂಟಿ ಮಾಡದೇ ಖಾಲಿ ಕೈಯಲ್ಲೇ ಹಿಂತಿರುಗಿದ್ದಾರೆ.
ಶೌಚಾಲಯ ಗೋಡೆ ಕೊರೆದು ಬ್ಯಾಂಕ್ ದರೋಡೆ
ರಾಷ್ಟ್ರೀಯ ಹೆದ್ದಾರಿ 63ರ ಪಕ್ಕದಲ್ಲೇ ಈ ಬ್ಯಾಂಕ್ ಶಾಖೆ ಇದ್ದು, ಶೌಚಾಲಯ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವುದನ್ನು ಗಮನಿಸಿದ ಖದೀಮರು ಅದೇ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬ್ಯಾಂಕ್ನ ಇತರೆ ಭಾಗಗಳಲ್ಲಿ ಸಿಸಿ ಕ್ಯಾಮರಾ ಇರುವ ಕಾರಣ, ಶೌಚಾಲಯದ ಗೋಡೆಯ ಮೂಲಕ ಪ್ರವೇಶಿಸಿದ್ದಾರೆ.

ಇದನ್ನು ಓದಿ : ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ 14 ವರ್ಷದ ಬಾಲಕ
ದೂರು ದಾಖಲು
ಘಟನೆಯ ಮಾಹಿತಿ ತಿಳಿದ ತಕ್ಷಣ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನ ದಳ ಹಾಗೂ ತಜ್ಞರ ತಂಡವನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದು, ಪ್ರಕರಣದ ಕುರಿತಂತೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪೊಲೀಸರಿಂದ ತನಿಖೆ
ಬ್ಯಾಂಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಶಂಕಿತರ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಇದನ್ನು ನೋಡಿ : ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು – ಕಾರಿನಲ್ಲಿದ್ದವರು ಗ್ರೇಟ್ ಎಸ್ಕೇಪ್




