Sagara Sharavathi ಹಿನ್ನೀರಿನಲ್ಲಿ ಮುಳುಗಿ ಪಶು ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ…!!

Sagara : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಕ್ರೆ ಬಳಿ ಇರುವ ಶರಾವತಿ ಹಿನ್ನೀರಿನಲ್ಲಿ (Sharavati Back Water) ಪಶುವೈದ್ಯರೊಬ್ಬರು ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಈ ದುರ್ಘಟನೆ ಭಾನುವಾರ, ಜನವರಿ 11ರಂದು ನಡೆದಿದೆ.
ಮೃತರನ್ನು ಸುನೀಲ್ (38) ಎಂದು ಗುರುತಿಸಲಾಗಿದೆ. ಅವರು ಸಾಗರ ತಾಲೂಕಿನ ಮಾಸೂರು ಪಶು ಆಸ್ಪತ್ರೆಯಲ್ಲಿ ಪಶುವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇದನ್ನು ಓದಿ : Hassan|ರೈಲಿನಿಂದ ಬಿದ್ದು ಅಪರಿಚಿತ ವ್ಯಕ್ತಿ ಸಾವು

ಪಿಕ್ನಿಕ್ ವೇಳೆ ಈಜಲು ನೀರಿಗಿಳಿದಾಗ ಅನಾಹುತ
ಭಾನುವಾರ ಕುಟುಂಬ ಸಮೇತ ಶರಾವತಿ ಹಿನ್ನೀರಿಗೆ ಪಿಕ್ನಿಕ್ಗೆ ತೆರಳಿದ್ದ ಸುನೀಲ್, ಈಜಲು ನೀರಿಗಿಳಿದ ಸಂದರ್ಭದಲ್ಲಿ ಅಕಸ್ಮಾತ್ತಾಗಿ ಮುಳುಗಿ ನಾಪತ್ತೆಯಾಗಿದ್ದಾರೆ. ಘಟನೆ ಗಮನಿಸಿದ ಕುಟುಂಬಸ್ಥರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಶೋಧ ಕಾರ್ಯಾಚರಣೆ ನಡೆಸಿ ನೀರಿನಿಂದ ಶವವನ್ನು ಮೇಲಕ್ಕೆತ್ತಿದ್ದಾರೆ.
ಪ್ರಕರಣ ದಾಖಲು
ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನು ನೋಡಿ : ನಿಧಿ ಸಿಕ್ಕಿರೋ ಲಕ್ಕುಂಡಿ ಗ್ರಾಮದ ಇತಿಹಾಸ ಏನು? ಮೂವರು ಅರಸರು ಆಳಿದ್ದ ಊರಿದು..!




