ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು 15 ನಿಮಿಷ ಮಾತ್ರ Mysuru ವಿಮಾನ ನಿಲ್ದಾಣದಲ್ಲಿ ಇರಲಿದ್ದಾರೆ.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇಂದು ಕೇವಲ 15 ನಿಮಿಷಗಳ ಕಾಲ Mysuru ವಿಮಾನ ನಿಲ್ದಾಣದಲ್ಲಿ ಇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಭಯ ಕುಶಲೋಪರಿ ಮಾತುಕತೆ ಮಾತ್ರ ನಡೆಯುವ ಸಾಧ್ಯತೆ ಇದೆ.

ತಮಿಳುನಾಡಿನ ಗುಡ್ಲುರಿಗೆ ಪ್ರಯಾಣ
ಇಂದು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಧ್ಯಾಹ್ನ 2:20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ರಾಹುಲ್ ಆಗಮಿಸಲಿದ್ದಾರೆ. 15 ನಿಮಿಷದ ಬಳಿಕ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ತಮಿಳುನಾಡಿನ ಗುಡ್ಲುರಿಗೆ ಪ್ರಯಾಣಿಸಲಿದ್ದಾರೆ. ಸಂಜೆ 5:45 ಕ್ಕೆ ಹೆಲಿಕಾಪ್ಟರ್ನಲ್ಲಿ ತಮಿಳುನಾಡಿನಿಂದ ಮೈಸೂರು ವಿಮಾನ ನಿಲ್ದಾಣಕ್ಕೆ ರಾಹುಲ್ ಮರಳಲಿದ್ದು, ಸಂಜೆ 6 ಗಂಟೆಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.
ಇದನ್ನು ಓದಿ : ಪ್ರಜಾಶಕ್ತಿ ಟಿವಿಯ 2026 ರ ಕ್ಯಾಲೆಂಡರ್ ಬಿಡುಗಡೆ

ಉಭಯ ಕುಶಲೋಪರಿ
ತಮಿಳುನಾಡಿನ ಕಾರ್ಯಕ್ರಮಗಳ ನಿಮಿತ್ತ ಮೈಸೂರಿಗೆ ಆಗಮಿಸುತ್ತಿರುವುದರಿಂದ ಇಂದು ಯಾವುದೇ ಮಹತ್ವದ ರಾಜಕೀಯ ಅಥವಾ ಆಡಳಿತಾತ್ಮಕ ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಹೀಗಾಗಿ ಇಂದಿನ ರಾಹುಲ್ ಗಾಂಧಿ–ಸಿಎಂ–ಡಿಸಿಎಂ ಭೇಟಿ ಕೇವಲ ಉಭಯ ಕುಶಲೋಪರಿಗಷ್ಟೇ ಸೀಮಿತವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನು ನೋಡಿ : ಖಮೇನಿ ವಿರುದ್ಧ ಸಿಟ್ಟು – 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ




