Tumakuru : ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಶೇಷ ಚೇತನ ಚಾಲಕಿ.

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ವತಿಯಿಂದ Tumakuru ನಗರದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಸರ್ಕಾರಿ ಪ್ರೌಢ ಶಾಲೆ, ಕಾಟೇನಹಳ್ಳಿಯ ಬಾಲಕಿ ಕುಮಾರಿ ಶ್ಯಾಮಲ 50 ಮೀಟರ್ ಓಟ ಮತ್ತು ಉದ್ದಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಇನ್ನು ವಿಜೇತ ಬಾಲಕಿಯನ್ನು ಶಾಲಾ ಎಸ್ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರು ಅಭಿನಂದಿಸಿದರು.
ಇದನ್ನು ಓದಿ : ಯಶ್ ಬರ್ತಡೇಗೆ ರಸ್ತೆಯಲ್ಲಿ ಬ್ಯಾನರ್ ಹಾಕಿದ್ದಕ್ಕೆ FIR
ಬಿಷೆಪ್ ಶಾಲ ಮೈದಾನದಲ್ಲಿ ಕ್ರೀಡಾಕೂಟ
ನಗರದ ಬಿಷೆಪ್ ಶಾಲ ಮೈದಾನದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ವಿವಿಧ ತಾಲ್ಲೂಕುಗಳಿಂದ ಹಲವಾರು ಮಕ್ಕಳು ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಅಧಿಕಾರಿಗಳು ಭಾಗಿ
ಇನ್ನು ಕಾರ್ಯಕ್ರಮದಲ್ಲಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗೋಪಾಲಕೃಷ್ಣ, ತಾಲ್ಲೂಕು ದೈಹಿಕ ಶಿಕ್ಷಣ ಅಧಿಕಾರಿ ಮಹಾವೀರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಗಂಗಾಧರಯ್ಯ, ಪ್ರಸನ್ನ ಕುಮಾರ್, ಸುರೇಶ್, ಬಸವರಾಜು ಮುಂತಾದವರು ಉಪಸ್ಥಿತರಿದ್ದರು.
ಇದನ್ನು ನೋಡಿ : ನೋಡು ನೋಡುತ್ತಿದ್ದಂತೆ ಕುಸಿದೆ ಬಿಡ್ತು ಮನೆ – ಅಬ್ಬಬ್ಬಾ..ಮಹಿಳೆ ಹಾಗೂ ಮಗು ಜಸ್ಟ್ ಮಿಸ್




