Mysore : ಬಜೆಟ್ ಅನ್ನು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ರಾಜ್ಯ ಬಜೆಟ್ ಅನ್ನು ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಯಾವಾಗ ಬಜೆಟ್ ಮಂಡನೆ..?
ಇಂದು Mysore ನ ವಿಮಾನ ನಿಲ್ದಾಣದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ಚರ್ಚಿಸಿ ಶೀಘ್ರದಲ್ಲೇ ದಿನಾಂಕವನ್ನು ಪ್ರಕಟಿಸಲಾಗುವುದಾಗಿ ತಿಳಿಸಿದರು. ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಬಜೆಟ್ ಮಂಡನೆ ನಡೆಯಲಿದೆ ಎಂದರು.
ಇದನ್ನು ಓದಿ : ಎರಡನೇ ಮದುವೆಯಾಗಿದ್ದಕ್ಕೆ ಹೆಂಡ್ತಿ ಪ್ರಶ್ನೆ – ಶಬರಿಮಲೆಗೆ ಹೋಗಿ ಬಂದು WIFE MURDER
Mysore ನಲ್ಲಿ ಸಿದ್ದು ಮಾಹಿತಿ
ಇನ್ನು ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸುವ ಉದ್ದೇಶದಿಂದ ಸಾಧನಾ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ಹೇಳಿದರು. ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶ ನಡೆಸಲು ಸಿದ್ಧತೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಸಾಧನಾ ಸಮಾವೇಶ
ರಾಜ್ಯ ಸರ್ಕಾರದ ಕಾರ್ಯಕ್ರಮಗಳು ಮತ್ತು ಮುಂದಿನ ಯೋಜನೆಗಳ ಬಗ್ಗೆ ಈ ಸಾಧನಾ ಸಮಾವೇಶದಲ್ಲಿ ವಿವರಿಸಲಾಗುವುದು ಎಂದು ಅವರು ಹೇಳಿದರು.
ಇದನ್ನು ನೋಡಿ : ವ್ಯಕ್ತಿಗೆ ಹಾವು ಕಡಿತ – ಆಂಬುಲೆನ್ಸ್ ಸಿಗದೇ ಪರದಾಡಿದ ಕುಟುಂಬಸ್ಥರು




