Bangalore ನಲ್ಲಿ ರೌಡಿಶೀಟರ್ನೊಬ್ಬನ ಬರ್ಬರ ಹತ್ಯೆಯಾಗಿದೆ.

Bangalore ನಲ್ಲಿ ರೌಡಿಶೀಟರ್ ಒರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಂಡೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಮ್ಮನ ಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಪೊಲೀಸ್ ಠಾಣೆ ಜಸ್ಟ್ ಕಿಲೋ ಮೀಟರ್ ದೂರದಲ್ಲೇ ಹತ್ಯೆ
ಹತ್ಯೆಯಾದ ವ್ಯಕ್ತಿಯನ್ನು ಶಬ್ಬೀರ್ ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ಈ ಕೊಲೆ ನಡೆದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾತ್ರಿ ಸ್ನೇಹಿತನನ್ನು ಭೇಟಿಯಾಗಲು ಬಂದಿದ್ದ ಶಬ್ಬೀರ್ ಮೇಲೆ ಆಟೋದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇನ್ನು ಬಂಡೆಪಾಳ್ಯ ಮುಖ್ಯ ರಸ್ತೆಯ ಪಕ್ಕದ ಪೊಲೀಸ್ ಠಾಣೆಗೆ ಸಮೀಪದಲ್ಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.
ಇದನ್ನು ಓದಿ : ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ

Bangalore ನಲ್ಲಿ ಬರ್ಬರ ಕೊಲೆ !
ಮಂಗಮ್ಮನ ಪಾಳ್ಯ ರಸ್ತೆಯಲ್ಲಿ ಶಬ್ಬೀರ್ನನ್ನು ಅಟ್ಟಾಡಿಸಿ, ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಬಂಡೆಪಾಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




