
SSLC ಮತ್ತು PUC ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇದುವರೆಗೆ ಒಟ್ಟು 16 ಮಂದಿಯನ್ನು ಬಂಧಿಸಲಾಗಿದ್ದು, ತನಿಖೆಯಲ್ಲಿ ಒಂದೊಂದೆ ವಿಚಾರ ಹೊರಬರುತ್ತಿವೆ.
ಪ್ರಶ್ನೆ ಪತ್ರಿಕೆ ಲೀಕ್ಗೆ ಟ್ವಿಸ್ಟ್ – ಏನದು?
ಈ ಪ್ರಕರಣದಲ್ಲಿ 6 ಶಿಕ್ಷಕರು ಮತ್ತು 10 ವಿದ್ಯಾರ್ಥಿಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು SSLC ಪ್ರಿಪರೇಟರಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆರಂಭಿಕ ತನಿಖೆಯಲ್ಲಿ ಪ್ರಶ್ನೆಪತ್ರಿಕೆಗಳು ಮೊದಲು ಶಿಕ್ಷಕರಿಂದಲೇ ಸೋರಿಕೆಯಾಗಿರುವುದು ದೃಢಪಟ್ಟಿದೆ.
ಇದನ್ನು ಓದಿ : ರಾಹುಲ್ ಗಾಂಧಿ ಭೇಟಿ ಬೆನ್ನಲ್ಲೇ ಕುತೂಹಲ ಕೆರಳಿಸಿದ DK ಪೋಸ್ಟ್!

ಆಪ್ತ ವಿದ್ಯಾರ್ಥಿಗಳಿಗಾಗಿ ಶಿಕ್ಷಕರಿಂದ್ಲೇ ಲೀಕ್
ಮೈಸೂರು, ಉಡುಪಿ ಹಾಗೂ ಗುಲ್ಬರ್ಗಾದ ಸರ್ಕಾರಿ ಅನುದಾನಿತ ಶಾಲೆಗಳ ಶಿಕ್ಷಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಕುತೂಹಲಕರ ಸಂಗತಿ ಎಂದರೆ, ಬಂಧಿತ 6 ಶಿಕ್ಷಕರಿಗೂ ಪರಸ್ಪರ ಯಾವುದೇ ಸಂಪರ್ಕ ಇರಲಿಲ್ಲ. ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲಿ ಎಂಬ ಉದ್ದೇಶದಿಂದ ಶಿಕ್ಷಕರು ತಮ್ಮ ನೆಚ್ಚಿನ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಗಳನ್ನು ನೀಡಿದ್ದರೆಂದು ತಿಳಿದುಬಂದಿದೆ.
ಹಣಕ್ಕಾಗಿ ಪ್ರಶ್ನೆಪತ್ರಿಕೆಗಳನ್ನು ಮಾರಾಟ
ಆದರೆ, ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಷ್ಟೇ ಅಲ್ಲದೆ, ಹಣಕ್ಕಾಗಿ ಮಾರಾಟ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಇದರಿಂದಲೇ ಪ್ರಕರಣ ದೊಡ್ಡ ಮಟ್ಟಕ್ಕೆ ತಲುಪಿದೆ. ತನಿಖೆ ವೇಳೆ 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ 200 ರೂ., 500 ರೂ., 2,000 ರೂ., 2,500 ರೂ. ಮತ್ತು 3,000 ರೂ. ನಗದು ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.

ಇದನ್ನು ನೋಡಿ : ತುರುವೇಕೆರೆಯಲ್ಲಿ ಚಿರತೆ ದಾಳಿ | 20 ಲಕ್ಷದ ಪರಿಹಾರದ ಚೆಕ್ ವಿತರಿಸಿ ಎಂ.ಟಿ.ಕೃಷ್ಣಪ್ಪ




