Shidlaghatta ನಗರಸಭೆ ಪೌರಾಯುಕ್ತೆ ಅಮೃತಾಗೌಡರನ್ನು ಕಾಂಗ್ರೆಸ್ ನಾಯಕ ರಾಜೀವ್ ಗೌಡ ನಿಂದಿಸಿ, ಪ್ರಾಣ ಬೆದರಿಕೆ ಹಾಕಿದ್ದಾರೆ..

Shidlaghatta : ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಪ್ರಾಣ ಬೆದರಿಕೆ ಹಾಕಿರುವ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಪೌರಾಯುಕ್ತೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಶಿಡ್ಲಘಟ್ಟ ಪಟ್ಟಣದಲ್ಲಿ ಅಕ್ರಮವಾಗಿ ಹಾಕಿದ್ದ ಬ್ಯಾನರ್ ಹಾಗೂ ಬಂಟಿಂಗ್ಸ್ ತೆರವುಗೊಳಿಸಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಈ ವಿವಾದ ಆರಂಭವಾಗಿದೆ.
ಇದರಿಂದ ಕೋಪಗೊಂಡ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಪೌರಾಯುಕ್ತೆ ಅಮೃತಾಗೌಡ ಅವರಿಗೆ ಫೋನ್ ಮೂಲಕ ಅವಾಚ್ಯ, ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮಾತನಾಡಿದ ಸಂಪೂರ್ಣ ಸಂಭಾಷಣೆ ಮೊಬೈಲ್ನಲ್ಲಿ ಆಡಿಯೋ ದಾಖಲಾಗಿದೆ.

ಪ್ರಾಣ ಬೆದರಿಕೆ ಆರೋಪ
ದೂರು ಪ್ರಕಾರ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆಂಕಿ ಹಾಕಿ ಸುಟ್ಟುಹಾಕುವುದಾಗಿ, ಚಪ್ಪಲಿಯಲ್ಲಿ ಹೊಡೆಯುವುದಾಗಿ,ದಂಗೆ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವಿದೆ.
ಇದೇ ವೇಳೆ, ಸ್ಥಳೀಯ ಶಾಸಕ ಬಿ.ಎನ್. ರವಿಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ವಿರುದ್ಧವೂ ಪರೋಕ್ಷವಾಗಿ ಅವಾಚ್ಯ ಪದ ಬಳಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ
ಈ ಪ್ರಕರಣ ಶಿಡ್ಲಘಟ್ಟದಿಂದ ದೆಹಲಿವರೆಗೂ ತಲುಪಿದೆ , ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.
ರಾಜೀವ್ ಗೌಡನ ಆಡಿಯೋವನ್ನು ಮುಖ್ಯ ಕಾರ್ಯದರ್ಶಿಗೆ ಕಳುಹಿಸಿರುವ ಕುಮಾರಸ್ವಾಮಿ, ಆರೋಪಿಯನ್ನು ತಕ್ಷಣ ಬಂಧಿಸಬೇಕು .ಮಹಿಳಾ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ ನೀವು ಕೂಡ ಹೆಣ್ಣುಮಗಳು.
ನಿಮ್ಮ ಅಧೀನದಲ್ಲಿ ಕೆಲಸ ಮಾಡುವ ಮಹಿಳಾ ಅಧಿಕಾರಿಗಳಿಗೆ ರಕ್ಷಣೆ ಇಲ್ಲವೇ?”
– ಕುಮಾರಸ್ವಾಮಿ ಪ್ರಶ್ನೆ
ಈ ಘಟನೆಗೆ ಸಂಬಂಧಿಸಿ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೌರಾಯುಕ್ತೆ ಅಮೃತಾಗೌಡ ಅವರು ಲಿಖಿತ ದೂರು ಸಲ್ಲಿಸಿದ್ದಾರೆ.

BNS ಕಾಯ್ದೆ ಅಡಿ ದಾಖಲಾಗಿರುವ ಸೆಕ್ಷನ್ಗಳು:
ಸೆಕ್ಷನ್ 79 ಸೆಕ್ಷನ್, 132 ಸೆಕ್ಷನ್, 352 ಸೆಕ್ಷನ್ ,199 ಸೆಕ್ಷನ್ 54 , ಪೌರಾಯುಕ್ತೆ ಪೌರಕಾರ್ಮಿಕರೊಂದಿಗೆ ತಮಟೆ ಚಳವಳಿ ಮೆರವಣಿಗೆ ನಡೆಸಿ ದೂರು ಸಲ್ಲಿಸಿದ್ದು, ಈ ಪ್ರಕರಣಕ್ಕೆ ಹೆಚ್ಚಿನ ತೀವ್ರತೆ ತಂದಿದೆ.
ಶಾಸಕ ರವಿಕುಮಾರ್ ಬೆಂಬಲ
ಶಿಡ್ಲಘಟ್ಟ ಶಾಸಕ ಬಿ.ಎನ್. ರವಿಕುಮಾರ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮುಖಂಡನ ವರ್ತನೆ ಸಂಸ್ಕೃತಿಯಲ್ಲ , ಅಧಿಕಾರಿಯ ಮೇಲೆ ದರ್ಪ ತೋರಿಸುವುದು ಖಂಡನೀಯ , ಪಕ್ಷವೇ ಇಂತಹವರನ್ನು ಹೊರಹಾಕಬೇಕು ಎಂದು ಹೇಳಿದ್ದಾರೆ. ನಾನು ಶಾಸಕನಾಗಿ ಹೆಣ್ಣುಮಗಳಾದ ಪೌರಾಯುಕ್ತೆಯ ಪರವಾಗಿ ನಿಲ್ಲುತ್ತೇನೆ.
ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಸುತ್ತೇವೆ” – ರವಿಕುಮಾರ್




