Ramanagara : ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ದಾರುಣ ಸಾವು.

Ramanagara : ಕನಕಪುರ ತಾಲ್ಲೂಕಿನ ಕಬ್ಬಾಳು ಕೆರೆಯಲ್ಲಿ ನೆನ್ನೆ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿಗಳನ್ನು 18 ವರ್ಷದ ತನುಷ್ ಮತ್ತು 19 ವರ್ಷದ ಸಂತೋಷ್ ಎಂದು ಗುರುತಿಸಲಾಗಿದೆ.
ಇದನ್ನು ಓದಿ : ರಾಜ್ಯ ರಾಜಕೀಯಕ್ಕೆ ಮತ್ತೆ HDK ರೀ ಎಂಟ್ರಿ..!
ಈಜಲು ತೆರಳಿದ್ದ ವಿದ್ಯಾರ್ಥಿಗಳು ಸಾವು
ಬುಧವಾರ ಕಬ್ಬಾಳು ದೇವಾಲಯಕ್ಕೆ ಬೆಂಗಳೂರಿನ ಬನಶಂಕರಿ ಕಾಲೇಜಿನ 11 ವಿದ್ಯಾರ್ಥಿಗಳು ಬಂದು ದೇವಿ ದರ್ಶನದ ಬಳಿಕ ಕಬ್ಬಾಳು ಕೆರೆಯಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿದ್ದು, ಆತನನ್ನ ರಕ್ಷಣೆ ಮಾಡಲು ಹೋದ ಮತ್ತೋರ್ವ ವಿದ್ಯಾರ್ಥಿ ಕೂಡಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಪ್ರಕರಣ ದಾಖಲು
ಇನ್ನು ಘಟನಾ ಸ್ಥಳಕ್ಕೆ ಸಾತನೂರು ಪೊಲೀಸ್ ಠಾಣಾ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸದ್ಯ ಮೃತದೇಹಗಳನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : ಸಂಕ್ರಾತಿಗೆ ಇಳಿಕೆ ಕಂಡ ಚಿನ್ನ; ಇಂದಿನ ರೇಟ್ ಇಲ್ಲಿದೆ

