Arasikere ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

Arasikere :ವಿಶೇಷವಾಗಿ ಹೆಚ್ಕೆಜಿಎನ್ ಬಡಾವಣೆಯಲ್ಲಿ ನಡೆದ ಘಟನೆಯೊಂದು ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ನಗರದ ಹೆಚ್ಕೆಜಿಎನ್ ಬಡಾವಣೆಯಲ್ಲಿ ಬೀದಿ ನಾಯಿಗಳ ಗುಂಪೊಂದು ಹಸುವಿನ ಮೇಲೆ ಕ್ರೂರವಾಗಿ ದಾಳಿ ನಡೆಸಿದೆ. ನಾಯಿಗಳು ಹಸುವನ್ನು ಅಟ್ಟಾಡಿಸಿಕೊಂಡು ಕಡಿದ ಪರಿಣಾಮ, ಹಸು ಸಾವು–ಬದುಕಿನ ಮಧ್ಯೆ ಹೋರಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ತಕ್ಷಣ ನಾಯಿಗಳನ್ನು ಓಡಿಸಲು ಪ್ರಯತ್ನಿಸಿದ್ದು, ದೊಡ್ಡ ಅನಾಹುತ ತಪ್ಪಿದೆ.
ಮಕ್ಕಳು ಹೊರಗೆ ಬಿಡಲು ಭಯ – ಪೋಷಕರ ಆತಂಕ
ಈ ಘಟನೆ ಬಳಿಕ ಬಡಾವಣೆಯ ಪೋಷಕರಲ್ಲಿ ಭೀತಿ ಹೆಚ್ಚಾಗಿದೆ. ಮಕ್ಕಳು ರಸ್ತೆಯಲ್ಲಿ ಓಡಾಡಲು ಹೆದರಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದು, ಪಕ್ಕದಲ್ಲೇ ಶಾಲೆ ಇರುವುದರಿಂದ ಮಕ್ಕಳನ್ನು ಶಾಲೆಗೆ ಕಳಿಸುವುದಕ್ಕೂ ಪೋಷಕರು ಹಿಂಜರಿಯುತ್ತಿದ್ದಾರೆ.
ಇದನ್ನು ಓದಿ : ಸಂಕ್ರಾಂತಿಗೆ ಇಳಿಕೆ ಕಂಡ Gold – ಬಂಗಾರದ ಬೆಲೆಯಷ್ಟು ಗೊತ್ತಾ?

ನಗರಸಭೆ ವಿರುದ್ಧ ಸ್ಥಳೀಯರ ಆಕ್ರೋಶ
ಸ್ಥಳೀಯ ನಿವಾಸಿಯೊಬ್ಬರು ಮಾತನಾಡಿ,
“ನಮ್ಮ ಬಡಾವಣೆಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಈ ಬಗ್ಗೆ ಅನೇಕ ಬಾರಿ ನಗರಸಭೆ ಅಧಿಕಾರಿಗಳಿಗೆ ದೂರು ನೀಡಿದ್ದೇವೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಕ್ಷಣ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಇನ್ನು ಸಾರ್ವಜನಿಕರು ಹಾಗೂ ಸ್ಥಳೀಯರು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಿ, ಸಾರ್ವಜನಿಕರು ಮತ್ತು ಪ್ರಾಣಿಗಳ ಸುರಕ್ಷತೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ನೋಡಿ : ಕೆಂಕೆರೆ ಮಂಜುನಾಥ್ MUR*ER CASE – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ತುಮಕೂರು SP




