Haveri : ಸಂಕ್ರಾಂತಿ ಹಬ್ಬದ ಸಂಪ್ರದಾಯದಂತೆ ಎತ್ತುಗಳನ್ನು ನದಿಯಲ್ಲಿ ಮೈತೊಳೆಯಲು ಕರೆದುಕೊಂಡು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ

Haveri ಸಂಕ್ರಾಂತಿ ಹಬ್ಬದ ದಿನದಂದು ಎತ್ತುಗಳನ್ನು ಮೈತೊಳೆಯಲು ನದಿಗೆ ತೆರಳಿದ್ದ 25 ವರ್ಷದ ಯುವಕ ಸಚಿನ್ ಬಸಪ್ಪ ಅಂಗಡಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ಹಾವೇರಿ ತಾಲೂಕಿನ ಹಳೇ ಮೆಲ್ಮುರಿ ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆ ವರದಾ ನದಿಯಲ್ಲಿ ಸಂಭವಿಸಿದೆ.
ಸಂಕ್ರಾಂತಿ ಹಬ್ಬದ ಸಂಪ್ರದಾಯದಂತೆ ಎತ್ತುಗಳನ್ನು ನದಿಯಲ್ಲಿ ಮೈತೊಳೆಯಲು ಕರೆದುಕೊಂಡು ಹೋಗಿದ್ದ ವೇಳೆ ಈ ಅವಘಡ ನಡೆದಿದೆ. ಈ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದ ಸಚಿನ್ ನದಿಯ ಪ್ರವಾಹಕ್ಕೆ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನು ಓದಿ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದ ಮಹಿಳೆ!
ಅಗ್ನಿಶಾಮಕ ದಳದಿಂದ ತೀವ್ರ ಶೋಧ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ಹಲವು ಗಂಟೆಗಳ ಕಾಲ ನಡೆದ ಶೋಧದ ಬಳಿಕ, ಕೊನೆಗೂ ಸಚಿನ್ ಅವರ ಮೃತದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು.
ಕುಟುಂಬಸ್ಥರ ಆಕ್ರಂದನ
ಮೃತದೇಹವನ್ನು ನದಿಯಿಂದ ಹೊರತೆಗೆದ ವೇಳೆ ಸಚಿನ್ ಅವರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು. ಯುವಕನ ಅಕಾಲಿಕ ಮರಣ ಕುಟುಂಬದವರಿಗೆ ತೀವ್ರ ಆಘಾತ ಉಂಟುಮಾಡಿದ್ದು, ಇಡೀ ಗ್ರಾಮವೇ ಶೋಕದಲ್ಲಿ ಮುಳುಗಿದೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಇದನ್ನು ನೋಡಿ : ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ ಗಂಡ




