Tumakuru ನಗರದ ಮಹಾತ್ಮ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಗಲಿದೆ.

Tumakuru ಕ್ರೀಡಾಂಗಣದ ಆವರಣದಲ್ಲಿ ಈಗಾಗಲೇ ಭವ್ಯ ವೇದಿಕೆ ನಿರ್ಮಿಸಲಾಗಿದ್ದು, ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ಜಿಲ್ಲಾಡಳಿತ ನೇತೃತ್ವದಲ್ಲಿ ಜನವರಿ 16ರಿಂದ 22ರವರೆಗೆ ನಡೆಯಲಿರುವ ಈ ಕ್ರೀಡಾಕೂಟಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 2.50ಕ್ಕೆ ಸಿಎಂ ಅವರು ತುಮಕೂರು ವಿಶ್ವವಿದ್ಯಾಲಯದ ಹೆಲಿಪ್ಯಾಡ್ಗೆ ಆಗಮಿಸಿ, ನಂತರ ಮಹಾತ್ಮ ಗಾಂಧಿ ಸ್ಟೇಡಿಯಂಗೆ ತೆರಳಿ ಕ್ರೀಡಾಕೂಟ ಉದ್ಘಾಟಿಸುತ್ತಾರೆ. ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಭಾಗವಹಿಸುವ ನಿರೀಕ್ಷೆ ಇದೆ.
ಇದನ್ನು ಓದಿ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದ ಮಹಿಳೆ!

ಸಭೆ ಮತ್ತು ಜಿಲ್ಲಾ ಅಭಿವೃದ್ದಿ ಚರ್ಚೆ
ಕಾರ್ಯಕ್ರಮ ಮುಗಿದ ನಂತರ, ಸಿಎಂ ಸಿದ್ದರಾಮಯ್ಯ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದು, ಜಿಲ್ಲೆಯ ಅಭಿವೃದ್ದಿ ಯೋಜನೆಗಳು ಹಾಗೂ ಆಡಳಿತ ಸಂಬಂಧಿತ ವಿಚಾರಗಳು ಚರ್ಚಿಸಲ್ಪಡುವುದು ನಿರೀಕ್ಷಿಸಲಾಗಿದೆ.

ಸಿಎಂ ಆಗಮನದ ಹಿನ್ನೆಲೆಯಲ್ಲಿ ತುಮಕೂರು ನಗರದ ಭದ್ರತಾ ವ್ಯವಸ್ಥೆ ಕಠಿಣಗೊಳಿಸಲಾಗಿದೆ. ಸ್ಥಳೀಯ ಪೊಲೀಸ್ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಿರೀಕ್ಷಿತ ಜನಸಾಮಾನ್ಯ ಹಾಗೂ ಕಾರ್ಯಕ್ರಮ ನಿರ್ವಹಣೆಯಲ್ಲಿ ಸುರಕ್ಷತೆ ಒತ್ತಾಯಿಸಲಾಗಿದೆ.
ಇದನ್ನು ನೋಡಿ : ಮತ್ತೊಬ್ಬಳ ಜತೆ ಲವ್ವಿಡವ್ವಿ: ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ ಗಂಡ




