Yadgir ಜಿಲ್ಲೆಯಲ್ಲಿ ವಿಚಾರಣೆ ನೆಪದಲ್ಲಿ ಕ್ಯಾನ್ಸರ್ ರೋಗಿಯ ಮೇಲೆ ಪೊಲೀಸರ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

Yadgir ಜಿಲ್ಲೆಯಲ್ಲಿ ವಿಚಾರಣೆ ನೆಪದಲ್ಲಿ ಕ್ಯಾನ್ಸರ್ ರೋಗಿಯ ಮೇಲೆ ಪೊಲೀಸರ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಠಾಣೆಗೆ ಕರೆದೊಯ್ದು ಮನಬಂದಂತೆ ಹಲ್ಲೆ ನಡೆಸಿದ ಪರಿಣಾಮ ಕೆಂಭಾವಿ ನಿವಾಸಿ ಮೆಹಬೂಬ್ ಅವರ ಕಾಲು ಮೂಳೆ ಮುರಿದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಪೊಲೀಸರ ಹಲ್ಲೆಯಿಂದ ಗಾಯಗೊಂಡ ಮೆಹಬೂಬ್ ಅವರನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಾಲ್ಕು ದಿನಗಳ ಹಿಂದೆ ನಡೆದಿರುವ ಮಾಹಿತಿ ಲಭ್ಯವಾಗಿದೆ.
ಐದು ತಿಂಗಳ ಹಿಂದಿನ ಪ್ರಕರಣದ ವಿಚಾರಣೆ
ಮೆಹಬೂಬ್ ಮತ್ತು ಉತ್ತರ ಪ್ರದೇಶ ಮೂಲದ ಸಾಹಿಲ್ ಎಂಬಾತ ಜಾತ್ರೆಗಳಲ್ಲಿ ಆಟಿಕೆ ಮಾರಾಟ ಮಾಡುತ್ತಿದ್ದರು. ಕಳೆದ ಆಗಸ್ಟ್ನಲ್ಲಿ ಆಟೋದಿಂದ ಬಿದ್ದು ಸಾಹಿಲ್ ಮೃತಪಟ್ಟಿದ್ದ. ಈ ಐದು ತಿಂಗಳ ಹಿಂದಿನ ಅಪಘಾತ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಮೆಹಬೂಬ್ ವಿಚಾರಣೆಗೆಂದು ಪೊಲೀಸರು ಕರೆದಿದ್ದರು ಎನ್ನಲಾಗಿದೆ.
ಇದನ್ನು ಓದಿ : ರಾಜ್ಯ ರಾಜಕೀಯಕ್ಕೆ ಮತ್ತೆ HDK ರೀ ಎಂಟ್ರಿ..!
ವಿಚಾರಣೆಗೆಂದು ಕರೆದುಕೊಂಡು ಹೋಗಿದ್ದ ಪೊಲೀಸರು, ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸರ ಏಟಿನಿಂದ ಮೆಹಬೂಬ್ನ ಕಾಲು ಮೂಳೆ ಮುರಿದಿದೆ ಎಂದು ತಿಳಿದು ಬಂದಿದೆ.
ನ್ಯಾಯ ಕೇಳಿದ ಕುಟುಂಬ
“ವಿಚಾರಣೆ ಹೆಸರಿನಲ್ಲಿ ಕ್ಯಾನ್ಸರ್ ರೋಗಿಯ ಮೇಲೆ ಹಲ್ಲೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ?” ಎಂದು ಕುಟುಂಬಸ್ಥರು ಪ್ರಶ್ನಿಸಿದ್ದಾರೆ. ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ನೋಡಿ : ಸಂಕ್ರಾತಿಗೆ ಇಳಿಕೆ ಕಂಡ ಚಿನ್ನ; ಇಂದಿನ ರೇಟ್ ಇಲ್ಲಿದೆ




