Tumakuru News : ತುಮಕೂರು ಜಿಲ್ಲೆಯಾದ್ಯಂತ ಇತ್ತೀಚೆಗೆ ಚಿರತೆ ಪ್ರತ್ಯಕ್ಷವಾಗ್ತಿದ್ದು, ಪ್ರಾಣಿಗಳು ಹಾಗೂ ಮನುಷ್ಯರ ಮೇಲೆ ದಾಳಿ ನಡೆಸುತ್ತಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ.

Tumakuru News : ತುಮಕೂರು ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಚಿರತೆ ಕಾಟ ವಿಪರೀತವಾಗ್ತಾ ಇದ್ದು, ಜನರ ನಿದ್ದಗೆಡಿಸಿದೆ. ಗ್ರಾಮಗಳಲ್ಲಿ ಮನೆ ಬಳಿಯೇ ಚಿರತೆ ಪ್ರತ್ಯಕ್ಷವಾಗ್ತಿದ್ದು, ಸಾಕು ಪ್ರಾಣಿಗಳು ಮತ್ತು ಮನುಷ್ಯರ ಮೇಲೆ ದಾಳಿ ನಡೆಸುತ್ತಿರುವಂತಹ ಪ್ರಕರಣಗಳು ಆಗುತ್ತಲೇ ಇವೆ.
ಇದೀಗೆ ಜಿಲ್ಲೆಯ ಕೊರಟಗೆರೆ ಪಟ್ಟಣದ 4ನೇ ವಾರ್ಡ್ ಕಾವಲುಬೀಳು ಗ್ರಾಮದ ನಿವಾಸಿ ರಮೇಶ್ ಎಂಬುವರ ಸಾಕುನಾಯಿಯ ಮೇಲೆ ರಾತ್ರಿ ಸುಮಾರಿಗೆ ಚಿರತೆ ದಾಳಿ ನಡೆಸಿತ್ತು. ಚಿರತೆ ದಾಳಿ ಹಿನ್ನಲೆ ಸುತ್ತಮುತ್ತಲ ನಿವಾಸಿಗಳು ಭಯಭೀತರಾಗಿದ್ದರು.
ಕೊರಟಗೆರೆಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಜನ
ಇನ್ನು ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಜನರು ಅಗ್ರಹಿಸಿದ್ದರು. ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಎರಡು ವರ್ಷದ ಚಿರತೆಯು ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದೆ.
ಇದನ್ನೂ ಓದಿ : Tumakuru : ಸೋಪನಹಳ್ಳಿಯಲ್ಲಿ ಮರಿಗಳೊಂದಿಗೆ ಚಿರತೆ ಪ್ರತ್ಯಕ್ಷ
ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ
ಹಿರೇಬೆಟ್ಟ ರಕ್ಷಿತ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಉಪಟಳ ಹೆಚ್ಚಾಗುತ್ತಿರುವದರ ಬಗ್ಗೆ ಗಮನಹರಿಸಿದ ಅರಣ್ಯ ಇಲಾಖೆ ತಕ್ಷಣ ಕ್ರಮವಹಿಸಿರುವುದರಿಂದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.
ಇನ್ನು ಬೋನಿಗೆ ಬಿದ್ದ ಚಿರತೆಯನ್ನ ನೋಡಲು ಜನತೆ ಮುಗಿಬಿದ್ದಿದ್ದಾರೆ. ಇನ್ನು ವಿಷಯ ತಿಳಿದ ತಕ್ಷಣ ಡಿಆರ್ಎಫ್ಒ ದಿಲೀಪ್ ಸೇರಿ ಸಿಬ್ಬಂದಿ ಸ್ಥಳಕ್ಕೆ ಬಂದು ಚಿರತೆಯನ್ನ ಸ್ಥಳಾಂತರಿಸುವ ಕಾರ್ಯ ಮಾಡಿದ್ದಾರೆ. ಚಿರತೆ ಬೋನಿಗೆ ಬಿದ್ದಿದ್ದರೂ ಕೂಡ ಗ್ರಾಮಸ್ಥರಲ್ಲಿ ಆತಂಕ ಮಾತ್ರ ದೂರವಾಗಿಲ್ಲ.
MUST WATCH: LEOPARD ATTACK ON WOMEN | ತೋಟಕ್ಕೆ ಹೋದ ಮಹಿಳೆಯನ್ನು ಚಿರತೆ ಕೊಂದ ಘಟನೆ SHOCKING




