CM Siddaramaiah : ತುಮಕೂರಿನಲ್ಲಿ ರಾಜ್ಯಮಟ್ಟದ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಇಂದಿನಿಂದ ಅಧಿಕೃತ ಚಾಲನೆ ಸಿಗಲಿದ್ದು, ಕ್ರೀಡಾಕೂಟಕ್ಕೆ ಉದ್ಘಾಟನೆ ನೆರವೇರಿಸಲು ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದಾರೆ.

CM Siddaramaiah : ಇಂದು ತುಮಕೂರಿನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಉದ್ಘಾಟನೆ ನೆರವೇರಿಸಲು ನೀಡಲು ತುಮಕೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ್ದಾರೆ.
ತುಮಕೂರಿಗೆ ಸಿಎಂ ಸಿದ್ದರಾಮಯ್ಯ ಎಂಟ್ರಿ
ಇನ್ನು ತಮ್ಮ ಆಪ್ತ ಹಾಗೂ ಮಾಜಿ ಸಚಿವ ರಾಜಣ್ಣ ಅವರ ನಿವಾಸಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ತುಮಕೂರು ಜಿಲ್ಲೆಯ ಕ್ಯಾತ್ಸಂದ್ರ ಸಮೀಪದಲ್ಲಿರುವ ರಾಜಣ್ಣ ನಿವಾಸಕ್ಕೆ ಸಿದ್ದರಾಮಯ್ಯ ಆಗಮಿಸಿದ್ದು, ರಾಜಣ್ಣ ಅವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿರುವ ಸಿಎಂ
ಜಿಲ್ಲಾಡಳಿತ ನೇತೃತ್ವದಲ್ಲಿ ಇಂದಿನಿಂದ ಜನವರಿ 22ರವರೆಗೆ ನಡೆಯುವ ಈ ಕ್ರೀಡಾಕೂಟಕ್ಕೆ ಮಹಾತ್ಮ ಗಾಂಧಿ ಸ್ಟೇಡಿಯಂ ಸಿಎಂ ತೆರಳಿ ಕ್ರೀಡಾಕೂಟವನ್ನ ಉದ್ಘಾಟಿಸಲಿದ್ದಾರೆ. ಇನ್ನು ಸಿಎಂ ಜೊತೆಗ ಗೃಹಸಚಿವರು ಸೇರಿದಂತೆ ಹಲವರು ಘಟಾನುಘಟಿ ನಾಯಕರು ಭಾಗಿಯಾಗಿದ್ದಾರೆ.
ಇದನ್ನೂ ಓದಿ: Tumakuru ನಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ CM ಚಾಲನೆ..!

ಆಪ್ತ ರಾಜಣ್ಣ ನಿವಾಸಕ್ಕೆ ಸಿದ್ದರಾಮಯ್ಯ ಆಗಮನ
ಸಿಎಂ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ರಾಜಣ್ಣ ಅವರ ನಿವಾಸದಲ್ಲಿ ವಿಶೇಷ ಸಿದ್ಧತೆಗಳನ್ನು ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಊಟವನ್ನು ತಯಾರಿಸಲಾಗಿತ್ತು. ಸಿಎಂ ಭೇಟಿ ಹಿನ್ನೆಲೆ ರಾಜಣ್ಣ ನಿವಾಸದ ಸುತ್ತಮುತ್ತ ಭಾರೀ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.
ರಾಜಣ್ಣಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರಿಂದ ಮನವಿ
ಸಿದ್ದರಾಮಯ್ಯ ಹಾಗೂ ರಾಜಣ್ಣ ನಡುವೆ ಕೆಲಕಾಲ ಸೌಹಾರ್ದಯುತ ಮಾತುಕತೆ ನಡೆಯಿತು. ಈ ವೇಳೆ ರಾಜಣ್ಣ ಅವರ ಬೆಂಬಲಿಗರು ಕೂಡ ಉಪಸ್ಥಿತರಿದ್ದು, ರಾಜಣ್ಣ ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಈ ಭೇಟಿ ತುಮಕೂರು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ರಾಜಣ್ಣ ಅವರ ರಾಜಕೀಯ ಭವಿಷ್ಯದ ಕುರಿತು ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ.
MUST WATCH: ಕೆಲವೇ ಕ್ಷಣಗಳಲ್ಲಿ ತುಮಕೂರಿಗೆ SIDDU – OLYMPICS ಉದ್ಘಾಟಿಸಲಿರೋ CM |TUMAKURU OLYMPICS |




