Weather Report : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ತೀವ್ರ ಚಳಿ ಮತ್ತು ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Weather Report : ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಕಂಡುಬರುತ್ತಿದ್ದು, ಜನರು ಹೆಚ್ಚಿನ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಬೆಂಗಳೂರಿನ ಹವಾಮಾನ ಹೇಗಿದೆ?
ಇಂದು ಬೆಂಗಳೂರಿನಲ್ಲಿ ಬೆಳಗ್ಗಿನ ವೇಳೆ ಮಂಜು ಮುಸುಕಿದ ವಾತಾವರಣವಿದ್ದು, ಕನಿಷ್ಠ ತಾಪಮಾನ 15°C, ಗರಿಷ್ಠ 28°C ದಾಖಲಾಗಲಿದೆ. ಚಳಿ ಹೆಚ್ಚಿರುವುದರಿಂದ ಮಕ್ಕಳು, ವೃದ್ಧರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರು ವಿಶೇಷ ಜಾಗ್ರತೆ ವಹಿಸಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿದಿದ್ದು, ಇಂದೂ ಅದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರಲಿದೆ. ಚಳಿಯ ಜೊತೆಗೆ ತೇವಾಂಶ ಕಡಿಮೆಯಾಗಿರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಇದನ್ನೂ ಓದಿ : Haveri ಯ ವರದಾ ನದಿಯಲ್ಲಿ ಮುಳುಗಿ ಯುವಕ ಸಾವು..!!
ಉತ್ತರ ಒಳನಾಡು ಹವಾಮಾನ
ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತೀವ್ರ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳ ಸ್ಥಿತಿ
ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಚಳಿಗಾಲದ ಪರಿಣಾಮವಾಗಿ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇರುವುದರಿಂದ,
- ಬೆಚ್ಚಗಿನ ಉಡುಪು ಧರಿಸಿ
- ಬಿಸಿ ಆಹಾರ ಸೇವಿಸಿ
- ಸಮತೋಲಿತ ಆಹಾರಕ್ಕೆ ಆದ್ಯತೆ ನೀಡಿ
- ಹೊರಗೆ ಹೋಗುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಿ
ಎಂದು ವೈದ್ಯರು ಹಾಗೂ ಹವಾಮಾನ ಇಲಾಖೆ ಸಲಹೆ ನೀಡಿದ್ದಾರೆ.
MUST WATCH : ಎತ್ತಿನ ಮೈ ತೊಳೆಯಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾ**




