
RAIN ALERT : ಸ್ವಲ್ಪ ದಿನಗಳ ಬಳಿಕ ವರುಣ ಮತ್ತೆ ಆರ್ಭಟಿಸಲು ಸಜ್ಜಾಗಿದ್ದಾರೆ. ರಾಜ್ಯದ ಹಲವೆಡೆಗಳಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಮುಂದಿನ ಒಂದು ವಾರ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದೆ. ಉತ್ತರಕರ್ನಾಟಕ ಭಾಗಗಳಲ್ಲಿ ಮುಂಗಾರು ಚುರುಕಾಗಿದೆ. ಹೀಗಾಗಿ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯ ಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 27ರವರೆಗೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ಇನ್ನು ಉಡುಪಿ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಧಾರಾಕಾರ ಮಳೆಯಾಗಿದೆ. ಇಂದು ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಮುಂದು ವರೆಯುವ ಸಾಧ್ಯತೆಯಿದೆ.




