Bengaluru ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Bengaluru ನಲ್ಲಿ ವಲಸೆ ಕಾರ್ಮಿಕರನ್ನು ಬೆದರಿಸಿದ ಆರೋಪದ ಹಿನ್ನೆಲೆಯಲ್ಲಿ ಹಿಂದುತ್ವ ಸಂಘಟನೆ ನಾಯಕ ಪುನೀತ್ ಕೆರೆಹಳ್ಳಿ (Puneeth Kerehalli) ಅವರನ್ನು ಬನ್ನೇರುಘಟ್ಟ (Bannerughatta) ಪೊಲೀಸ್ ಠಾಣಾ ಪೊಲೀಸರು ತಡರಾತ್ರಿ ಬಂಧಿಸಿದ್ದಾರೆ.
ವಲಸೆ ಕಾರ್ಮಿಕರು (Migrant Workers) ವಾಸಿಸುತ್ತಿದ್ದ ಮನೆಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಮತ್ತು ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟು ಮಾಡಿದ್ದಾರೆ ಎಂಬ ಗಂಭೀರ ಆರೋಪ ಪುನೀತ್ ಕೆರೆಹಳ್ಳಿ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಇದನ್ನು ಓದಿ : ದ್ವಿಚಕ್ರ ವಾಹನಕ್ಕೆ ಸಿಲುಕಿದ ಗಾಳಿಪಟದ ದಾರ – ದಂಪತಿ, ಪುತ್ರಿ ಸಾವು..!!

ಈ ಘಟನೆ ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎಂದು ತಿಳಿದು ಬಂದಿದೆ.
ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಅವರ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ಪೊಲೀಸರು ಅವರನ್ನು ಠಾಣೆಯೊಳಗೆ ಪ್ರವೇಶಿಸಲು ಅವಕಾಶ ನೀಡದೆ ತಡೆಹಿಡಿದರು.
ತನಿಖೆ ಮುಂದುವರಿಕೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನು ನೋಡಿ : ಯಪ್ಪಾ..ಇವರು ಅಂತಿಥಾ ಕಳ್ಳರಲ್ಲ..! – ಕೇಬಲ್ ವೈರ್ ಕದಿಯುತ್ತಿದ್ದ ಗ್ಯಾಂಗ್




