Bengaluru : ಮತ್ತೆ Metro ದರ ಹೈಕ್ ಶಾಕ್?

ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಈಗಾಗಲೇ ಕಳೆದ ಫೆಬ್ರವರಿ 9ರಂದು BMRCL ಒನ್ ಟು ಡಬಲ್ ಪ್ರಯಾಣ ದರವನ್ನು ಶೇ.105.5 ರಷ್ಟು ಏರಿಕೆ ಮಾಡಿದ್ದರಿಂದ ಪ್ರಯಾಣಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇನ್ನು ವ್ಯಾಪಕ ವಿರೋಧದ ಹಿನ್ನೆಲೆಯಲ್ಲಿ ನಂತರ ದರ ಏರಿಕೆಯನ್ನು ಶೇ.71.5ಕ್ಕೆ ಇಳಿಸಲಾಗಿತ್ತು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರ
ಈ ಗೊಂದಲದ ನಡುವೆಯೇ ಪ್ರತಿವರ್ಷ ಫೆಬ್ರವರಿಯಲ್ಲಿ ಶೇ.5ರಷ್ಟು ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಸಿದ್ಧತೆ ಮಾಡಿಕೊಂಡಿರುವುದು ಮತ್ತೊಮ್ಮೆ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ.
ಇದನ್ನು ನೋಡಿ : ತುಮಕೂರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದು- ಹಾಕಿ ಸ್ಟೇಡಿಯಂ, ಸ್ವಿಮ್ಮಿಂಗ್ ಫೂಲ್ ಗಿಫ್ಟ್ CM SIDDARAMAIAH

ದರ ನಿಗದಿ ಸಮಿತಿ ಪುನರ್ ರಚನೆಗೆ ಆಗ್ರಹ
ಪ್ರತಿವರ್ಷ ಫೆಬ್ರವರಿಯಲ್ಲಿ 5% ಸ್ವಯಂಚಾಲಿತ ದರ ಏರಿಕೆ ಮಾಡಲು ಬಿಎಂಆರ್ಸಿಎಲ್ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮೆಟ್ರೋಗೆ ದರ ನಿಗದಿ ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಧಿಕಾರಿಗಳ ತಪ್ಪು ಲೆಕ್ಕ ಸರಿಪಡಿಸುವವರೆಗೆ ವಾರ್ಷಿಕ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದ್ದಾರೆ.
ಈ ಪತ್ರವನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ಗೆ ಕಳುಹಿಸಲಾಗಿದೆ.

BMRCL ವಿರುದ್ಧ ಹೋರಾಟದ ಎಚ್ಚರಿಕೆ
ಇತ್ತ, ಸೇವ್ ಬೆಂಗಳೂರು ಕಮಿಟಿ ಹಾಗೂ ಬೆಂಗಳೂರು Metro ಪ್ರಯಾಣಿಕರ ವೇದಿಕೆ ಬಿಎಂಆರ್ಸಿಎಲ್ ವಿರುದ್ಧ ಹೋರಾಟಕ್ಕೆ ಎಚ್ಚರಿಕೆ ನೀಡಿವೆ.
ಯಾವುದೇ ಕಾರಣಕ್ಕೂ ಮುಂದಿನ ತಿಂಗಳಿಂದ ಮೆಟ್ರೋ ದರ ಏರಿಕೆ ಮಾಡಬಾರದು ಎಂದು ಒತ್ತಾಯಿಸಿ ರುವ ಪ್ರಯಾಣಿಕ ಸಂಘಟನೆಗಳು, ಪದೇಪದೇ ನಡೆಯುತ್ತಿರುವ ದರ ಏರಿಕೆ ಜನಸಾಮಾನ್ಯರ ಮೇಲೆ ಭಾರೀ ಆರ್ಥಿಕ ಹೊರೆ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿವೆ.

ಇದನ್ನು ಓದಿ : Bidar|ಮಾಜಿ ಸಚಿವ ಡಾ.ಭೀಮಣ್ಣ ಖಂಡ್ರೆ ನಿಧನ




