Train ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಕೇಸ್̧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪೋಕ್ಸೋ ಅಡಿ ಆರೋಪಿಗೆ 5 ವರ್ಷ ಜೈಲು ಶಿಕ್ಷೆ..

Train ನಲ್ಲಿ ಚಲಿಸುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ 28 ವರ್ಷದ ಸಿ.ಎ. ಸತ್ಯ ಅಲಿಯಾಸ್ ಮೊಟ್ಟೆ ಎಂಬಾತನಿಗೆ ಪೋಕ್ಸೋ ನ್ಯಾಯಾಲಯ 5 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 2,000 ರೂ. ದಂಡ ವಿಧಿಸಿದೆ. ಆರೋಪಿಯು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ.
ಘಟನೆ ವೇಳೆ ಬಾಲಕಿ ರೈಲಿನಲ್ಲಿ ಬೆಂಗಳೂರುದಿಂದ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದರು. ಇದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸತ್ಯ ಎಂಬ ವ್ಯಕ್ತಿ ಬಾಲಕಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು.
ಈ ಕುರಿತು ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಮೈಸೂರು ವೃತ್ತದ ರೈಲ್ವೆ ಇನ್ಸ್ಪೆಕ್ಟರ್ ಎಲ್. ಶ್ರೀನಿವಾಸ್ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.
ಇದನ್ನು ಓದಿ : ಮತ್ತೆ ಗಗನಮುಖಿಯಾಯ್ತು Gold Rate – ಇಂದು ಹೆಚ್ಚಾಗಿದ್ದು ಎಷ್ಟು ನೋಡಿ

ಪೋಕ್ಸೋ ನ್ಯಾಯಾಲಯದ ತೀರ್ಪು
ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಎಸ್. ಹೆಳವರ ಅವರು ಪ್ರಕರಣದ ವಿಚಾರಣೆ ನಡೆಸಿದರು. ತನಿಖೆ ಮತ್ತು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಇದಲ್ಲದೆ, ಪೀಡಿತ ಬಾಲಕಿಗೆ 53,000 ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ಸೂಚಿಸಿದೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಣಮಂತರಾಯ ತಳಕೇರಿ ಅವರು ವಾದ ಮಂಡಿಸಿದ್ದು, ಬಾಲಕಿಗೆ ನ್ಯಾಯ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.
ಇದನ್ನು ನೋಡಿ : ಮದುವೆ ಮಾಡಿಸಿದ ಪೂಜಾರಿಗೆ ಲಾಂಗು ಮಚ್ಚು ತೋರ್ಸಿದ್ರಂತೆ ರಾಜೀವ್ ಗೌಡ




