Pavagada ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಪಾವಗಡದಲ್ಲಿ ನೆಡೆದಿದೆ.

Pavagada ತಾಲೂಕಿನ ರಾಜವಂತಿ ಗ್ರಾಮದ ಸಮೀಪದ ಬಾರ್ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಯುವಕನನ್ನು 25 ವರ್ಷದ ಅಂಬರೀಶ್ ಎಂದು ಗುರುತಿಸಲಾಗಿದೆ.
ಮೃತ ಅಂಬರೀಶ್ ತನ್ನ ಸ್ನೇಹಿತನೊಂದಿಗೆ ಮಧುಗಿರಿ ನ್ಯಾಯಾಲಯದ ಕೆಲಸಕ್ಕಾಗಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಸ್ಥಳಕ್ಕೆ ಧಾವಿಸಿದ್ದು, ಅಂಬರೀಶ್ ಮೃತದೇಹ ಕಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಅಪಘಾತದ ಕುರಿತು ಮಾಹಿತಿ ಪಡೆಯಲು ಸಂಬಂಧಿಕರು ಸಿಪಿಐ ಸುರೇಶ್ ಅವರನ್ನು ಸಂಪರ್ಕಿಸಿದಾಗ, ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪವನ್ನು ಕುಟುಂಬಸ್ಥರು ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಮೃತನ ಸಂಬಂಧಿಕರು ಹಾಗೂ ಸಾರ್ವಜನಿಕರು ಪಟ್ಟಣದ ಟೋಲ್ಗೇಟ್ ಬಳಿ ರಸ್ತೆ ತಡೆ ನಡೆಸಿದರು.

ರಸ್ತೆ ತಡೆಯಿಂದಾಗಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡು ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸ್ ಇಲಾಖೆ ಮುಂದಾದ ಬಳಿಕ ಸಂಚಾರ ಪುನಃ ಆರಂಭವಾಯಿತು.
ಟಿಪ್ಪರ್ಗಳ ಅತಿವೇಗಕ್ಕೆ ಜನರ ಆಕ್ರೋಶ
ಇತ್ತೀಚಿನ ದಿನಗಳಲ್ಲಿ ಪಾವಗಡ ತಾಲೂಕಿನಲ್ಲಿ ಟಿಪ್ಪರ್ಗಳ ಅತಿವೇಗದ ಸಂಚಾರದಿಂದ ನಿರಂತರ ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ನಿಯಂತ್ರಣ ಯಾರು ಹಾಕುತ್ತಾರೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಗಂಭೀರವಾಗಿ ಕೇಳಿಬರುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ : ಕಲ್ಟ್ ಟ್ರೈಲರ್ ರಿಲೀಸ್ ಇದು – ಭಗ್ನ ಪ್ರೇಮಿಯ ಕತೆ..!!

ಸಿಸಿಟಿವಿಯಲ್ಲಿ ಸೆರೆಗೊಂಡ ಭೀಕರ ದೃಶ್ಯ
ಈ ಭೀಕರ ರಸ್ತೆ ಅಪಘಾತದ ದೃಶ್ಯ ಅಕ್ಕಪಕ್ಕದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯಗಳನ್ನು ಕಂಡ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಇದೇ ಸ್ಥಳದಲ್ಲಿ ಈ ಹಿಂದೆಯೂ ಹಲವು ಅಪಘಾತಗಳು ನಡೆದಿರುವುದನ್ನು ಸ್ಥಳೀಯರು ನೆನಪಿಸಿದ್ದಾರೆ.
ಅಪಘಾತಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮತ್ತು ಕುಟುಂಬಸ್ಥರು ಅಧಿಕಾರಿಗಳಿಗೆ ಆಗ್ರಹಿಸಿದ್ದು, ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನು ನೋಡಿ : ಗದಗ: ಆಂಜನೇಯ ದೇಗುಲದಲ್ಲಿ 3 ದಿನಗಳಿಂದ ನಿರಂತರ ನಿಗೂಢ ಗೆಜ್ಜೆ ಶಬ್ದ!




