Kodagu ಜಿಲ್ಲೆ ಸೋಮವಾರಪೇಟೆ ಹೊಳೆಯಲ್ಲಿ ತಾಲ್ಲೂಕಿನ ಹರದೂರು ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ಜಲ ಸಮಾಧಿ..

Kodagu : ಶಾಲೆ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ಜಲ ಸಮಾಧಿಯಾದ ದುರ್ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹರದೂರು ಗ್ರಾಮದಲ್ಲಿ ನಡೆದಿದೆ.
ಈ ದುರ್ಘಟನೆ ಶನಿವಾರ (ಜ.17) ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಂಭವಿಸಿದೆ. ಹರದೂರು ಗ್ರಾಮದ ಸಮೀಪ ಇರುವ ಹೊಳೆಯಲ್ಲಿ ಸ್ನಾನಕ್ಕೆ ಇಳಿದ ವೇಳೆ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಈ ದುರ್ಘಟನೆಯಲ್ಲಿ ಸುಂಟಿಕೊಪ್ಪ ಪಂಪ್ ಹೌಸ್ ರಸ್ತೆಯ ನಿವಾಸಿಗಳಾದ ಎ.ಎಂ. ಶರೀಫ್ ಅವರ ಪುತ್ರ ಮಹಮದ್ ರಹೀಜ್ (16) ಸರ್ದಾರ್ ಅವರ ಪುತ್ರ ಮಹಮದ್ ನಿಹಾಲ್ (16) .ಇಬ್ಬರೂ ಬಾಲಕರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರು ಚೆನ್ನಮ್ಮ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದರು.
ಇದನ್ನು ಓದಿ : ಭಾರತೀಯ ರಿಸರ್ವ್ ಬ್ಯಾಂಕ್ನಲ್ಲಿ ಉದ್ಯೋಗವಕಾಶ – 10th ಪಾಸಾಗಿದ್ರೆ ಸಾಕು!
ಮಧ್ಯಾಹ್ನ ಕಾಲೇಜು ಮುಗಿಸಿ ಮನೆಗೆ ಬರುವ ವೇಳೆ, ಸ್ನಾನಕ್ಕಾಗಿ ಸಮೀಪದ ಹೊಳೆಗೆ ತೆರಳಿದ್ದಾಗ ಈ ಅವಘಡ ನಡೆದಿದೆ. ನೀರಿನ ಆಳ ಅಂದಾಜಿಸಲು ಸಾಧ್ಯವಾಗದೆ ಇಬ್ಬರೂ ಮುಳುಗಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮುಳುಗು ತಜ್ಞರ ಸಹಾಯದಿಂದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕುಶಾಲನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ನೋಡಿ : BIKE ಮತ್ತು TIPPER ನಡುವೆ ಅಪ*ತ – ಠಾಣೆಯ ಮುಂದೆ ಮೃತ ವ್ಯಕ್ತಿಯ ಪೋಷಕರಿಂದ ಆಕ್ರೋಶ

