Bhatkal : ಚಾಲಕನ ನಿಯಂತ್ರಣ ತಪ್ಪಿ ಕಾರು (Car) ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ನಡೆದಿದೆ.

Bhatkal ದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ವೆಂಕಟಾಪುರದ ಬಳಿ ನಡೆದಿದೆ.
ಈ ಅಪಘಾತದಲ್ಲಿ ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನುದ್ದೀನ್ ಶಿಪಾಯಿ ಅವರ ಪುತ್ರರಾದ ಬಿಲಾಲ್ (15) ಆಯಾನ್ (20)
ಮೃತಪಟ್ಟಿದ್ದಾರೆ.
ಶಿರಾಲಿಯಿಂದ ಭಟ್ಕಳದ ಕಡೆಗೆ ಕಾರಿನಲ್ಲಿ ಬರುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಿಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಇದನ್ನು ಓದಿ : ಫಿನಾಲೆಗೂ ಮುನ್ನ ಬಿಗ್ ಶಾಕ್ – Bigg Boss ತಂಡಕ್ಕೆ ನೋಟಿಸ್ ನೀಡಿದ್ಯಾರು?
ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಯಾನ್ ಅವರನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಅವರು ಉಸಿರು ಚೆಲ್ಲಿದ್ದಾರೆ.
ಪೊಲೀಸ್ ಕ್ರಮ
ಘಟನೆ ಕುರಿತು ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ.
ಈ ದುರ್ಘಟನೆಯಿಂದ ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರಲ್ಲೂ ತೀವ್ರ ಶೋಕದ ವಾತಾವರಣ ಆವರಿಸಿದೆ.
ಇದನ್ನು ನೋಡಿ : CM SIDDARAMAIAH | ಬಳ್ಳಾರಿ ಗಲಭೆ ಪ್ರಕರಣದ ಬಗ್ಗೆ ಸಿಎಂ ಸಿದ್ದು ಏನಂದ್ರು




