ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತ್ಮಾಹುತಿ Bomb Threat ಬಂದಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತ್ಮಾಹುತಿ ಬಾಂಬ್ ದಾಳಿ ಮಾಡಲು ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ದುಷ್ಕರ್ಮಿಗಳು ಏರ್ಪೋರ್ಟ್ನ ಟರ್ಮಿನಲ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ತೀವ್ರ ಬೆದರಿಕೆ ನೀಡಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಟರ್ಮಿನಲ್ ಸ್ಫೋಟ ಮಾಡುವುದಾಗಿ ಬೆದರಿಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ gaina-ramesh@outlook.com ಎಂಬ ಇ-ಮೇಲ್ ವಿಳಾಸದಿಂದ ಸಂದೇಶ ಬಂದಿದೆ. ದುಷ್ಕರ್ಮಿಗಳು ಮೂರು ಆರ್ಡಿಎಕ್ಸ್ (RDX) ಮತ್ತು ಐಇಡಿ (IED) ಬಳಸಿ ಟರ್ಮಿನಲ್ ಸ್ಫೋಟ ಮಾಡುವುದಾಗಿ ಬೆದರಿಸಿದ್ದಾರೆ.
ಇದನ್ನು ಓದಿ : ಚಿನ್ನಸ್ವಾಮಿಯಲ್ಲಿ IPL ಆಡೋದಕ್ಕೆ ಷರತ್ತುಬದ್ಧ ಅನುಮತಿ – ಪರಮೇಶ್ವರ್

Bomb Threat – ಎಚ್ಚರಿಕೆ ಕ್ರಮಗಳು ಜಾರಿಗೆ
ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸಿ, ಬಾಂಬ್ ಪತ್ತೆದಳ ಮತ್ತು ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಎಲ್ಲ ವಿಭಾಗಗಳು ತಪಾಸಣೆ ನಡೆಸಿದರೂ ಯಾವುದೇ ಸ್ಪೋಟಕಗಳು ಪತ್ತೆಯಾಗಿಲ್ಲ.
ವಿಮಾನ ನಿಲ್ದಾಣದಲ್ಲಿ ಯಾತ್ರಿಕರಿಗೆ ಯಾವುದೇ ತೊಂದರೆಂಟಾಗದಂತೆ ಎಚ್ಚರಿಕೆ ಕ್ರಮಗಳು ಜಾರಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ನೋಡಿ : ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ




