Shivamogga ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ಭೀಕರ ದುರಂತ ಸಂಭವಿಸಿದೆ.

Shivamogga : ಮಾರಿ ಹಬ್ಬಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಒಂದೇ ಕುಟುಂಬದ ನಾಲ್ವರು ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾಗ ನೀರುಪಾಲಾಗಿದ್ದಾರೆ. ಕಾಲು ಜಾರಿ ಬಿದ್ದವರನ್ನು ರಕ್ಷಿಸಲು ಹೋಗಿ ಉಳಿದವರೂ ದುರಂತ ಅಂತ್ಯ ಕಂಡಿದ್ದಾರೆ.
ಕಾಲುಜಾರಿ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ನೀರುಪಾಲಾದ (death) ಘಟನೆ ಜಿಲ್ಲೆಯ ಭದ್ರಾವತಿ (Bhadravati) ತಾಲೂಕಿನ ಅರಬಿಳಚಿ ಕ್ಯಾಂಪ್ನ ಭದ್ರಾ ನಾಲೆಯಲ್ಲಿ ನಡೆದಿದೆ. ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದ ದುರಂತ ಸಂಭವಿಸಿದೆ.
ನೀಲಾ ಬಾಯಿ(50), ಮಗ ರವಿ(23), ಮಗಳು ಶ್ವೇತಾ(24) ಮತ್ತು ಅಳಿಯ ಪರಶುರಾಮ(28) ಮೃತರು. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನು ಓದಿ : Sira|ಅಮಾವಾಸ್ಯೆ ಹಿನ್ನೆಲೆ ಮನೆ ಮುಂದೆ ವಾಮಾಚಾರ
ನಡೆದದ್ದೇನು?
ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾರೆ. ಒಬ್ಬರು ಕಾಲು ಜಾರಿ ಭದ್ರಾ ನಾಲೆಗೆ ಬಿದ್ದಿದ್ದು, ಅವರನ್ನ ರಕ್ಷಿಸಲು ಹೋಗಿ ನಾಲ್ವರೂ ನೀರುಪಾಲಾಗಿದ್ದಾರೆ.
ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು. ಸದ್ಯ ಶವಗಳಿಗಾಗಿ ಹೊಳೆಹೊನ್ನೂರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧ ನಡೆದಿದೆ.
ಇದನ್ನು ನೋಡಿ : ಮದುವೆ ಮಾಡಿಸಿದ ಪೂಜಾರಿಗೆ ಲಾಂಗು ಮಚ್ಚು ತೋರ್ಸಿದ್ರಂತೆ ರಾಜೀವ್ ಗೌಡ




