
CHITRADURGA ACCIDENT : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬಡಗೊಲ್ಲರಹಟ್ಟಿ ಗ್ರಾಮದ ಬಳಿ ನೆನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ರಾತ್ರಿ ಸುಮಾರು 10.30ರ ಸಮಯದಲ್ಲಿ, ಕೊಪ್ಪಳ ಜಿಲ್ಲೆ ಹೊಸಹಳ್ಳಿ ಗ್ರಾಮದ ನಿವಾಸಿಯಾಗಿ ರುವ ರಾಜೇಶ್ ಎಂಬವರು ತನ್ನ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಬಡಗೊಲ್ಲರಹಟ್ಟಿ ಗ್ರಾಮದ ಗೇಟ್ ಬಳಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆ ಬಳಿ ನಿಯಂತ್ರಣ ತಪ್ಪಿ ಅವರ ಬೈಕ್ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಇನ್ನು ಅಪಘಾತದ ಬಳಿಕ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಿರಿ ಯೂರು ಗ್ರಾಮಾಂತರ ಠಾಣೆಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದು ವರೆಸಲಾಗಿದೆ.




