Bengaluru : ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವಿವೇಕನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.

Bengaluru : ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಸಂಗೀತಾ (37) ಮತ್ತು ಅವರ ಮಗ ಪಾರ್ಥ (8) ಮೃತಪಟ್ಟಿದ್ದಾರೆ. ಸಂಗೀತಾ ಅವರು ಆರ್ಮಿ ಪಬ್ಲಿಕ್ ಶಾಲೆಯಲ್ಲಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದು, ಇಬ್ಬರೂ ಅದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಪತಿ ಪ್ರಸಾದ್ ಊರಿನಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇಂದು (ಜನವರಿ 19) ಬೆಳಿಗ್ಗೆ ಸುಮಾರು 6:30ರ ವೇಳೆಗೆ, ಸಂಗೀತಾ ಅವರು ಮಗನೊಂದಿಗೆ ಶಾಲೆಗೆ ಹಾಗೂ ಕೆಲಸಕ್ಕೆ ತೆರಳುತ್ತಿದ್ದಾಗ, ರಸ್ತೆ ದಾಟುವ ಸಂದರ್ಭದಲ್ಲಿ ಖಾಸಗಿ ಕಾಲೇಜು ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ತಾಯಿ–ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನು ಓದಿ : 100 ಗ್ರಾಂ ನುಗ್ಗೆ ಸೊಪ್ಪಿನಲ್ಲಿದೆ ನೂರೆಂಟು ಬೆನಿಫಿಟ್!

ಪೊಲೀಸ್ ತನಿಖೆ
ಘಟನಾ ಸ್ಥಳಕ್ಕೆ ಅಶೋಕನಗರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬೋರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೂ, ಅಪಘಾತದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕ ಸುನೀಲ್ಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.\
ಈ ದುರ್ಘಟನೆ ನಗರದಲ್ಲಿ ರಸ್ತೆ ಸುರಕ್ಷತೆ ಮತ್ತು ಅಜಾಗರೂಕ ಚಾಲನೆಯ ಅಪಾಯವನ್ನು ಪ್ರಶ್ನೆಯಾಗಿ ಮುಂದಿಟ್ಟಿದೆ. ಸಾರ್ವಜನಿಕರು ಹಾಗೂ ವಾಹನ ಚಾಲಕರು ಹೆಚ್ಚಿನ ಜಾಗರೂಕತೆ ವಹಿಸುವ ಅಗತ್ಯವಿದೆ.
ಇದನ್ನು ನೋಡಿ : TUMAKURU GILLI FANS | ಎಲ್ಲೆಲ್ಲೂ GILLIದೇ ಹವಾ..! – FULL JOSH | FANS IN CRAZE




